ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಪ್ರತಿಭೆಗಳ ಪ್ರಕಾಶವೂ ಮುಖ್ಯ: ಹರೀಶ್ ಎಂ. ವೈ.

Upayuktha
0

ಉಜಿರೆ: ವಿದ್ಯಾರ್ಥಿಗಳು ವಿದ್ಯೆಯನ್ನು ತಪವನ್ನಾಗಿಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಯಾಗಿ ಹೊರಹೊಮ್ಮಬೇಕು. ಇದಕ್ಕೆ ಕೇವಲ ಪಠ್ಯ ವಿಷಯ ಅಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು. ಇದರೊಂದಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಪ್ರತಿಭೆಗಳ ಪ್ರಕಾಶವೂ ಮುಖ್ಯ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ಎಂ.ವೈ ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ದ.ಕ ಜಿಲ್ಲಾ ಶಿಕ್ಷಣ ಇಲಾಖೆ ಮಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಿ ಮಾತನಾಡಿದರು.


ಪ್ರಾಚಾರ್ಯ ಪ್ರೊ. ಎನ್. ದಿನೇಶ ಚೌಟ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಉಪ ಪ್ರಾಚಾರ್ಯ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.


ಉಪನ್ಯಾಸಕ ಡಾ.ರಾಜೇಶ್ ಬಿ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕಿ ದಿವ್ಯಾ ಕುಮಾರಿ ಧನ್ಯವಾದ ಅರ್ಪಿಸಿದರು. ದೀಕ್ಷಿತ್ ರೈ ನಿರೂಪಿಸಿದರು. ಒಟ್ಟು ನಲ್ವತ್ತು ಕಾಲೇಜುಗಳಿಂದ ಸುಮಾರು ಐನೂರರೈವತ್ತು ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top