ಕಾಸರಗೋಡಿನ ಡಾ. ವಾಣಿಶ್ರೀಗೆ ಮಾಣಿಕ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Upayuktha
0

ಹಾಸನ: ಶ್ರೀಮತಿ ದೀಪಾ ಉಪ್ಪಾರ್ ನೇತೃತ್ವದ ಮಾಣಿಕ್ಯ ಪ್ರಕಾಶನ ಹಾಸನ ಹಾಗೂ ಕೊಟ್ರೇಶ್ ಉಪ್ಪಾರ್  ಸಂಸ್ಥಾಪಕ ಅಧ್ಯಕ್ಷರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಸಂಸ್ಥೆಯ ವತಿಯಿಂದ ಆರನೇ ವರ್ಷದ ರಾಜ್ಯಮಟ್ಟದ ಕವಿ-ಕಾವ್ಯ ಸಂಭ್ರಮ, ದತ್ತಿ ಪ್ರಶಸ್ತಿ ಹಾಗೂ ಮಾಣಿಕ್ಯ ರಾಜ್ಯೋತ್ಸವ ಪ್ರಶಸ್ತಿ  ಪ್ರದಾನ ಸಮಾರಂಭವು ನವೆಂಬರ್ 20 ಭಾನುವಾರ ಹಾಸನದ ಸಂಸ್ಕೃತ ಭವನದಲ್ಲಿ ಬಹಳ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾಡಿನ ಖ್ಯಾತ ಕವಯಿತ್ರಿ ಡಾ. ಶಶಿಕಲಾ ವಸ್ತ್ರದ ಅವರು ದೀಪ ಬೆಳಗುವ ಮೂಲಕ ನೆರವೇರಿಸಿದರು.


ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಂಶೋಧನಾ ಹಾಗೂ ಬೋಧನಾ ಸಹಾಯಕರಾದ ಡಾ. ಹಸೀನಾ ಎಚ್.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಹಲವಾರು ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದರು.


ಈ ಸುಂದರ ಸಮಾರಂಭದಲ್ಲಿ ಗಡಿನಾಡದ ಕಾಸರಗೋಡಿನ ಚೂರಿಪ್ಪಳ್ಳದಲ್ಲಿರುವ ಪ್ರಕೃತಿ ಆಯುರ್ವೇದ ಆಸ್ಪತ್ರೆಯ ವೈದ್ಯೆ, ಸಾಹಿತಿ, ಸಂಘಟಕಿ ಹಾಗೂ ಸಮಾಜ ಸೇವಕಿಯಾದ ಡಾ. ವಾಣಿಶ್ರೀ ಕಾಸರಗೋಡು ಇವರ  ಕನ್ನಡ ಭಾಷೆಯ ಉಳಿವಿಗಾಗಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಹಾಗೂ ತೆರೆ ಮರೆಯ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆ ಒದಗಿಸಿ ಕೊಟ್ಟು ಕಲೆಯನ್ನು ಬೆಳೆಸುವ ಸಲುವಾಗಿ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಎಂಬ ಸಂಘಟನೆ ಕಟ್ಟಿಕೊಂಡು ಕನ್ನಡ ನಾಡು ನುಡಿಯ ರಕ್ಷಣೆಗಾಗಿ ಹೋರಾಡುವ ಮನೆ ಮನೆ ಅಭಿಯಾನದಿಂದ ಜನರ ಸಮಸ್ಯೆಗಳ ಅರಿತು ಸೂಕ್ತ ಪರಿಹಾರ ಒದಗಿಸಿ ಕೊಡುವ ನಿಟ್ಟಿನಲಿ ಪ್ರಯತ್ನಿಸುವ ಸಮಾಜ ಸೇವೆಯನ್ನು ಗುರುತಿಸಿ ಮಾಣಿಕ್ಯ ಪ್ರಕಾಶನದ ಪ್ರತಿಷ್ಠಿತ "ಮಾಣಿಕ್ಯ ರಾಜ್ಯೋತ್ಸವ ಪ್ರಶಸ್ತಿ 2022" ಪ್ರಶಸ್ತಿಯನ್ನು ಟೈಮ್ಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಕೆ.ಗಂಗಾಧರ್ ಸಹಿತ ಎಲ್ಲಾ ಗಣ್ಯರ ಉಪಸ್ಥಿತಿಯಲ್ಲಿ ನೀಡಿ ಗೌರವಿಸಿದರು.


ಕೊಟ್ರೇಶ್ ಎಸ್ ಉಪ್ಪಾರ್ ಸಂಸ್ಥಾಪಕ ಅಧ್ಯಕ್ಷರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು, ಡಾ. ಹಸೀನಾ ಎಚ್ ಕೆ ಹಾಗೂ ಹಲವಾರು ಗಣ್ಯರು ಇವರು ಉಪಸ್ಥಿತರಿದ್ದರು. ಸಂಘಟನೆ ಜೊತೆಗೆ ಸಾಹಿತ್ಯ ಕೃಷಿಯಲ್ಲೂ ನಿರತರಾಗಿರುವ ಡಾ.ವಾಣಿಶ್ರೀ ಕಾಸರಗೋಡು ಇವರು ಪ್ರಕೃತಿ ಎಂಬ ಕೃತಿಯನ್ನು ಹೊರ ತಂದಿದ್ದಾರೆ. ಹಲವಾರು ಪ್ರಶಸ್ತಿ ಗಳಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.


ಕ್ರಿಯಾಶೀಲ ಸಂಘಟಕರಾಗಿರುವ ಇವರು ಹಲವಾರು ಯುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಗೌರವಿಸಿ ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸುವುದರ ಜೊತೆಗೆ ಕನ್ನಡ ನಾಡು ನುಡಿ ಸಾಹಿತ್ಯ ಸಂಸ್ಕೃತಿಯನ್ನು ವಿಸ್ತರಿಸುವ ವೈವಿಧ್ಯಮಯ ಕಾರ್ಯಕ್ರಮಗಳನ್ನು ಕಾಸರಗೋಡಿನ ಮೂಲೆ ಮೂಲೆಗಳಲ್ಲಿ ಹಾಗೂ ಹೊರ ರಾಜ್ಯಗಳಲ್ಲೂ ನಡೆಸಿಕೊಂಡು ಬಂದಿರುತ್ತಾರೆ. ಏಳು ಸಾಹಿತ್ಯ ಬಳಗಗಳ ಕೇರಳ ಅಧ್ಯಕ್ಷರಾಗಿರುವ ಇವರು ಸುಮಾರು 600ಕ್ಕೂ ಹೆಚ್ಚು ಕವನಗಳನ್ನು ಬರೆದಿರುತ್ತಾರೆ.


ಇವರು ತಮ್ಮ ಸಂಸ್ಥೆಯ ಮೂಲಕ ಗೋಕರ್ಣ ಕ್ಷೇತ್ರದ ಅಶೋಕೆಯಲ್ಲಿ, ನೆಕ್ರಾಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ. ಕುದ್ರೆಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ. ಶ್ರೀ ವನದುರ್ಗಾ ದೇವಸ್ಥಾನ ಮೀನಾಡಿಪಳ್ಳ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಧೂರು ಶ್ರೀ ಮಹಾಗಣಪತಿ ದೇವಸ್ಥಾನ.ಕುಂಭಾಷಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ, ದೇವಸ್ಥಾನ. ಮಲ್ಲ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ, ಕುಂಜರಿಕಾನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಮಧೂರು ಶ್ರೀ ಕಾಳಿಕಾಂಬ ದೇವಸ್ಥಾನ, ನಲ್ಕ ಶ್ರೀ ವಾಗ್ದೇವಿ ಭಜನಾ ಮಂದಿರ, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ, ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಶ್ರೀ ಚೌಡೇಶ್ವರಿ ದೇವಸ್ಥಾನ ಮಾನ್ಯ, ಕೂಟತ್ತಜೆ ಶ್ರೀ ಉಳ್ಳಾಲ್ತಿ ದೈವಸ್ಥಾನ, ಅಂಬಲಪಾಡಿ ದೇವಸ್ಥಾನ ಉಡುಪಿ, ಎಡನೀರು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಉಡುಪಿಯ ಶ್ರೀ ಕೃಷ್ಣ ಮಠದ ಪ್ರಸಿದ್ಧ ರಾಜಾಂಗಣ, ಬದಿಯಡ್ಕ ಶ್ರೀ ಗಣೇಶ ಮಂದಿರ, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಕಾಸರಗೋಡು, ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಕಾಸರಗೋಡು, ಹೀಗೆ ಹಲವಾರು ಸಾಹಿತ್ಯ ಕಾರ್ಯಕ್ರಮಗಳಲ್ಲಿ ಹಲವು ದೇವಸ್ಥಾನಗಳಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಸಿಕೊಂಡು ಬಂದಿರುತ್ತಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top