ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ನ.5, 6ರಂದು ಪುರುಷರ ಕಬಡ್ಡಿ ಪಂದ್ಯಾಟ

Upayuktha
0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟವು ನವಂಬರ್ 5 ಮತ್ತು 6 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.


ನವಂಬರ್ 5 ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ಕರ್ನಾಟಕ ಅರಣ್ಯ ಇಲಾಖೆಯ ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ. ಯು.ಆರ್ ಪ್ರಾಪರ್ಟೀಸ್ ಪುತ್ತೂರು ಇದರ ಮಾಲಕ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪೂರ್ವ ವಿದ್ಯಾರ್ಥಿ ಉಜ್ವಲ್ ಕುಮಾರ್, ಥಿಂಕ್ ಎಂಡ್ ಲರ್ನ್ ಇದರ ಮುಖ್ಯಸ್ಥ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪೂರ್ವ ವಿದ್ಯಾರ್ಥಿ ವಿಶಾಂತ್ ರೈ ಮತ್ತು ಭಾಗ್ಮನೆ ಡೆವೆಲಪರ್ಸ್ ಬೆಂಗಳೂರು ಇದರ ಅಧಿಕಾರಿ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪೂರ್ವ ವಿದ್ಯಾರ್ಥಿ ಅಭಿಷೇಕ್.ಕೆ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.


ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಪಂದ್ಯಾಟದ ಸಂಘಟನಾ ಅಧ್ಯಕ್ಷ ಮತ್ತು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.


ಮ್ಯಾಟ್ ಅಂಕಣದಲ್ಲಿ ನಡೆಯುವ ಈ ಪಂದ್ಯಾಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 15 ತಂಡಗಳು ಭಾಗವಹಿಸುತ್ತವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top