
ಮಂಗಳೂರು: ದಿನಾಂಕ 29-11-2022ನೇ ಮಂಗಳವಾರದಂದು ಸಂಜೆ 7 ರಿಂದ 9 ರವರೆಗೆ ನಗರದ ನಂತೂರಿನಲ್ಲಿರುವ ಶ್ರೀ ಭಾರತೀ ಕಾಲೇಜು ಇದರ ಶಂಕರಶ್ರೀ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಇದರ ಆಶ್ರಯದಲ್ಲಿ ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಕಾಲೇಜು ನಂತೂರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಇದರ ಸಹಕಾರದೊಂದಿಗೆ ‘ನಗೆ ಹಬ್ಬ’ ಕಾರ್ಯಕ್ರಮ ಜರುಗಲಿರುವುದು ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಗೌರವ ಕಾರ‍್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಮತ್ತು ಗಣೇಶ್ ಪ್ರಸಾದ್‌ಜೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಖ್ಯಾತ ಹಾಸ್ಯ ಬರಹಗಾರ ಹಾಗೂ ಸಾಹಿತಿ ಅಣಕು ರಾಮನಾಥ್ ಮತ್ತು ‘ಹರಟೆ’ ಖ್ಯಾತಿಯ ವೈ.ಬಿ ಗುಂಡೂರಾವ್ ಅವರು ಈ ಕರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ರಾಮನಾಥ್ ಅವರು ‘ಹಿರಣ್ಯಯ್ಯ ಮತ್ತು ಹಾಸ್ಯ’ ಹಾಗೂ ಗುಂಡುರಾವ್ ಅವರು ‘ಬೀಚಿ ಮತ್ತು ಹಾಸ್ಯ’ ಎಂಬ ವಿಚಾರಗಳ ಬಗ್ಗೆ ಪ್ರೇಕ್ಷಕರನ್ನು ರಂಜಿಸಲಿದ್ದಾರೆ ಎಂದು ಕಸಾಪ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಮಂಜುನಾಥ್ ಎಸ್. ರೇವಣಕರ್ ವಹಿಸಲಿದ್ದಾರೆ ಮತ್ತು ಮುಖ್ಯ ಅತಿಥಿಗಳಾಗಿ ಹವ್ಯಕ ಸಭಾ ಮಂಗಳೂರು ಇದರ ಅಧ್ಯಕ್ಷರಾದ ಡಾ|| ರಾಜೇಂದ್ರ ಪ್ರಸಾದ್ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ಈ ನಗೆಹಬ್ಬಕ್ಕೆ ಮುಕ್ತ ಉಚಿತ ಪ್ರವೇಶವಿದ್ದು ಎಲ್ಲರನ್ನೂ ಈ ಕಾರ‍್ಯಕ್ರಮಕ್ಕೆ ಸ್ವಾಗತಿಸುತ್ತೇವೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ