ಮಂಗಳೂರು: ಕೇಂದ್ರ ಸರ್ಕಾರದ ಸೂಚನೆಯಂತೆ ನವೆಂಬರ್ 19 ರಿಂದ ನವೆಂಬರ್ 25 ರವೆರೆಗೆ ಆಚರಿಸಲಾಗುತ್ತಿರುವ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ, ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ, ಬೋಧಕ- ಬೋಧಕೇತರ ಸಿಬ್ಬಂದಿಗೆ ರಾಷ್ಟ್ರೀಯ ಐಕ್ಯತಾ ಪ್ರಮಾಣವಚನ ಬೋಧಿಸಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರ ನೇತೃತ್ವದಲ್ಲಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಲತಾ ಎ. ಪಂಡಿತ್ , ದೇಶದ ಸ್ವಾತಂತ್ರ್ಯ ಮತ್ತು ಐಕ್ಯತೆಯನ್ನು ಉಳಿಸಿ ಬಲಪಡಿಸುವ ನಿಟ್ಟಿನಲ್ಲಿ ಪ್ರಮಾಣವಚನ ಬೋಧಿಸಿದರು. ಸಪ್ತಾಹದ ಅಂಗವಾಗಿ ಅಲ್ಪಸಂಖ್ಯಾತರ ಕಲ್ಯಾಣ ದಿನ, ಭಾಷಾ ಸೌಹಾರ್ದತಾ ದಿನ, ದುರ್ಬಲ ವರ್ಗಗಳ ದಿನ, ಸಂಸ್ಕೃತಿಕ ಏಕತಾ ದಿನ, ಮಹಿಳಾ ದಿನ ಹಾಗೂ ಪರಿಸರ ರಕ್ಷಣಾ ದಿನಗಳನ್ನು ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ