ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪ.ಪೂ ಕಾಲೇಜಿನ ನಿಹಾಲ್ ರಾಜ್‌ಗೆ ಬೆಳ್ಳಿಯ ಪದಕ

Upayuktha
0

ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ನವೆಂಬರ್ 19 ರಿಂದ 23ರವರೆಗೆ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈತನು ಕಬಕದ ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಪುತ್ರ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈತನು ತರಬೇತಿಯನ್ನು ಪಡೆದಿರುತ್ತಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top