ಅಗ್ನಿಪಥ್ ಯೋಜನೆಯಡಿ ಆನ್‌ಲೈನ್ ಪರೀಕ್ಷೆ ನೋಂದಣಿಗೆ ನ.23 ಕೊನೆಯ ದಿನ

Upayuktha
0

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಗೆ ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಾಯಿಸಲು ನವೆಂಬರ್ 23 ಕೊನೆಯ ದಿನ.


2002 ಜೂನ್ 27 ರಿಂದ 25 ರ ಡಿಸೆಂಬರ್ 27 ರ ನಡುವೆ ಜನಿಸಿರುವ, ಪಿ.ಯು.ಸಿಯಲ್ಲಿ (ಕಲಾ, ಕಲೆ, ವಾಣಿಜ್ಯ, ವಿಜ್ಞಾನ, ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ. 50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ - ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ ಮಣಿಪಾಲ - ಉಡುಪಿ, ದೂರವಾಣಿ ಸಂಖ್ಯೆ :9945856670, 8197440155 ಮತ್ತು 8105618291 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top