ತೆಂಕನಿಡಿಯೂರು: ಗಣಕ ವಿಜ್ಞಾನ ವಿಭಾಗದಲ್ಲಿ ಒಂದು ದಿನದ ಕಾರ್ಯಾಗಾರ

Upayuktha
0

ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಗಣಕ ವಿಜ್ಞಾನ ವಿಭಾಗದಿಂದ ಒಂದು ದಿನದ ಕಾರ್ಯಾಗಾರವನ್ನು ದಿನಾಂಕ : 18/11/2022 ರಂದು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರುಕ್ಮಿಣಿ ಶೆಡ್ತಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಉಪನ್ಯಾಸಕ ಶ್ರೀ ಹರೀಶ್ ಕಾಂಚನ್ ಇವರು ತೃತೀಯ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ವೆಬ್‌ಟೆಕ್ನಾಲಜಿ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿ – ಇಂದಿನ ದಿನಗಳಲ್ಲಿ ಕಂಪ್ಯೂಟರ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಭಿನ್ನ ಮತ್ತು ವಿಶೇಷವಾದ ಅವಕಾಶಗಳು ವಿಫುಲವಾಗಿ ಲಭಿಸುತ್ತವೆ ಎಂದು ಹೇಳಿದರು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ ಹಾಗೂ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.


ವಿಭಾಗ ಮುಖ್ಯಸ್ಥರಾದ ಶ್ರೀ ಬಸವರಾಜ್ ಯು. ಇವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top