ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಿಂದ 2022-23 ಈ ಶೈಕ್ಷಣಿಕ ಸಾಲಿನ ಪ್ರಥಮ ಪದವಿ ಸ್ವಯಂ ಸೇವಕರಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಹಾಗೂ 2021-22ರಲ್ಲಿ ಇದ್ದ ರಾಷ್ಟ್ರೀಯ ಸೇವಾ ಯೋಜನೆಯ ಎಲ್ಲಾ ಪದಾಧಿಕಾರಿಗಳಿಗೆ ಅಭಿವಂದನಾ ಕಾರ್ಯಕ್ರಮವನ್ನು ಬುಧವಾರ (ನ.23) ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ ಕೆ ಶರತಕುಮಾರ್ ಇವರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ಶಂಕರ್ ರಾವ್ ಬಿ ಇವರು ರಾಷ್ಟ್ರೀಯ ಸೇವಾ ಯೋಜನೆಯ ಪ್ರಯೋಜನದ ಬಗೆಗೆ ಮಾಹಿತಿಯನ್ನು ನೀಡಿದರು. 2021-22 ನೇ ಸಾಲಿನ ಎಲ್ಲಾ ಪದಾಧಿಕಾರಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಅವರನ್ನು ಅಭಿವಂದಿಸಲಾಯಿತು.
ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಚಿತ್ರಾ ಪಡಿಯಾರ್ ಮತ್ತು ಸಂತೋಷ್ ಪ್ರಭು ಎಂ ಹಾಗೂ ಕಾಲೇಜಿನ ಎಲ್ಲಾ ಬೋಧದಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಎಲ್ಲಾ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳಾದ ಶ್ರಾವ್ಯ ಸ್ವಾಗತಿಸಿ, ರೂಪೇಶ್ ಧನ್ಯವಾದವಿತ್ತರು ಹಾಗೂ ಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ