ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಪವಿತ್ರ.ಜಿ ಬೆಳ್ಳಿ ಪದಕ ಸಾಧನೆ

Upayuktha
0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ.


ಛತ್ತೀಸ್‌ಗಢದ ಬಿಲಾಸ್‌ಪುರ್‌ನಲ್ಲಿ ನಡೆದ 23ರ ಹರೆಯದೊಳಗಿನ 2ನೇ ರಾಷ್ಟ್ರೀಯ ಅತ್ಲೆಟಿಕ್ ಕ್ರೀಡಾಕೂಟದಲ್ಲಿ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 12.79 ಮೀಟರ್ ದೂರ ಜಿಗಿಯುವ ಮೂಲಕ ತನ್ನ ವೈಯಕ್ತಿಕ ದಾಖಲೆಯನ್ನೂ ಉತ್ತಮ ಪಡಿಸಿಕೊಂಡಿದ್ದಾರೆ. ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಇವರಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top