ಹಲವು ಜಾತಿ ಮತಗಳಿದ್ದರೂ ನಾವೆಲ್ಲರೂ ಜೊತೆಗಿದ್ದೇವೆ: ಡಾ. ದಯಾನಂದ ನಾಯಕ್

Upayuktha
0

ವಿವಿ ಕಾಲೇಜು: ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ವಿಭಾಗಗಳ ವತಿಯಿಂದ ಉಪನ್ಯಾಸ ಕಾರ್ಯಕ್ರಮ


ಮಂಗಳೂರು: ನಮ್ಮಲ್ಲಿ ಹಲವು ಜಾತಿ, ಮತ, ಭಾಷೆ, ಸಂಸ್ಕೃತಿಗಳಿದ್ದರೂ ನಾವೆಲ್ಲರೂ ಒಟ್ಟಿಗೇ ಇದ್ದೇವೆ ಎಂದರೆ ಅದಕ್ಕೆ ಕಾರಣ ನಮ್ಮ ಭಾವೈಕ್ಯತೆ, ಅದೇ ನಮ್ಮ ಶಕ್ತಿ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ದಯಾನಂದ್ ನಾಯಕ್ ಅಭಿಪ್ರಾಯಪಟ್ಟರು.


ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ರಾಜ್ಯಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಭಾಗಗಳ ವತಿಯಿಂದ ಸಂವಿಧಾನ ದಿನದ ಅಂಗವಾಗಿ ಮಂಗಳವಾರ ಆಯೋಜಿಸಲಾಗಿದ್ದ 'ರಾಷ್ಟ್ರೀಯ ಭಾವೈಕ್ಯತಾ ಸಪ್ತಾಹ' ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅವರು, ಸಂವಿಧಾನ ಎಂಬುದು ಬರೀ ಪುಸ್ತಕವಲ್ಲ ಅದರಲ್ಲಿ ನಿತ್ಯ ಜೀವನಕ್ಕೆ ಬೇಕಾದ ತತ್ವಗಳಿವೆ, ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಶುಪಾಲೆ ಡಾ. ಅನಸೂಯ ರೈ, ಇಷ್ಟು ದೊಡ್ಡ ಜನಸಂಖ್ಯೆ ಇರುವ ದೇಶದಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಾಮಾನ್ಯ, ಆದರೆ ನಾವು ಅದನ್ನೆಲ್ಲ ಮೀರಿ ಏಕತೆಯಿಂದಿರಬೇಕು, ಎಂದರು.


ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ ಲತಾ ಪಂಡಿತ್ ಅತಿಥಿಗಳನ್ನು ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಗಾಯತ್ರಿ ವಂದಿಸಿದರು. ಸಮಾಜಶಾಸ್ತ್ರ ಪ್ರಾಧ್ಯಾಪಕ ರುಕ್ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ. ಶಾನಿ ಕೆ ಆರ್‌, ಉಪನ್ಯಾಸಕರಾದ ಡಾ.ರಾಜೇಶ್ವರಿ, ಸುನಿಲ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top