ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅಧಿಕಾರ ಸ್ವೀಕಾರ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರು ನವೆಂಬರ್ 02ರ ಬುಧವಾರ ಅಧಿಕಾರ ವಹಿಸಿಕೊಂಡರು.


ಪ್ರಭಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿ, ಶುಭ ಹಾರೈಸಿದರು.


ರವಿಕುಮಾರ್ ಎಂ.ಆರ್. ಅವರು ಈ ಹಿಂದೆ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರನ್ನು ಸರ್ಕಾರ ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top