ಉಜಿರೆ ಕಾಲೇಜಿನಲ್ಲಿ ಆಯುಷ್ಮಾನ್ ಕಾರ್ಡ್ ನೋಂದಾವಣೆ ಶಿಬಿರ

Upayuktha
0

ಉಜಿರೆ: ಶ್ರೀ ಧ. ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಗ್ರಾಮ ಪಂಚಾಯತ್ ಉಜಿರೆ ಮತ್ತು ಎಸ್.ಕೆ. ಡಿ.ಆರ್.ಡಿ.ಪಿ ಧರ್ಮಸ್ಥಳ ಇದರ ಸಹಯೋಗದಲ್ಲಿ ಕೇಂದ್ರ ಸರ್ಕಾರ ಕೊಡ ಮಾಡುತ್ತಿರುವ ಆಯುಷ್ಮಾನ್ ಭಾರತ್ ಯೋಜನೆಯ ಆರೋಗ್ಯ ಕಾರ್ಡ್ (ಆಭಾ ಕಾರ್ಡ್) ನೋಂದಾವಣೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಆಯೋಜಿಸಿತ್ತು.


ಅತಿಥಿಯಾಗಿ ಆಗಮಿಸಿದ್ದ ಪ್ರತಿನಿಧಿ ಶ್ರೀಮತಿ ಶ್ರುತಿ ಗುಡಿಗಾರ್ ಇವರು ವಿದ್ಯಾರ್ಥಿಗಳಿಗೆ ಆ ಯೋಜನೆಯ ಉಪಯೋಗಗಳನ್ನು ತಿಳಿಸಿ, ನೋಂದಾವಣೆಗೆ ಚಾಲನೆ ಕೊಟ್ಟರು. 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಕೂಡ ಈ ಶಿಬಿರದ ಪ್ರಯೋಜನ ಪಡೆದುಕೊಂಡರು.


ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಧಿಕಾರಿಗಳಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್ ಹಾಗೂ ಶ್ರೀಮತಿ ದೀಪಾ ಆರ್. ಪಿ ಉಪಸ್ಥಿತರಿದ್ದರು. ಸ್ವಯಂಸೇವಕಿ ಅಂಜನಾ ಕೆ ರಾವ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top