
ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳು ನವೆಂಬರ್ 28ರಂದು ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿತವಾದ ಓರಿಯೆಂಟೇಶನ್ ಕಾರ್ಯಕ್ರಮದ ಮೂಲಕ ವಿದ್ಯುಕ್ತವಾಗಿ ಚಾಲನೆ ಕಾಣಲಿವೆ. ಈ ಕಾರ್ಯಕ್ರಮಕ್ಕೆ ಕೇಂದ್ರದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಸಾಕ್ಷಿಯಾಗಲಿದ್ದಾರೆ.
ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಎಸ್.ಡಿ.ಎಂ.ನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಾರ್ಯನಿರ್ವಹಣೆಯ ಸಮಗ್ರ ಸ್ವರೂಪವನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಈ ಸಾಂಸ್ಥಿಕ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ಸಲದ ಕಾರ್ಯಕ್ರಮವನ್ನು ಮೂಲತಃ ಅಳದಂಗಡಿಯವರಾಗಿರುವ, ಪ್ರಸ್ತುತ ಲಂಡನ್ ಸ್ಕೂಲ್ ಆಫ್ ಮೆಡಿಸಿನ್‌ನ ಪ್ರಾಧ್ಯಾಪಕ, ನವಜಾತಶಿಶು ತಜ್ಞ ಪ್ರೊ. ನರೇಂದ್ರ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಈ ಕಾರ್ಯಕ್ರಮ ಆರಂಭಗೊಳ್ಳಲಿದೆ.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಉದಯಚಂದ್ರ ಪಿ.ಎನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ