ಧರ್ಮಸ್ಥಳ ಲಕ್ಷದೀಪೋತ್ಸವ: ನ.24 ರಂದು ಸಮವಸರಣ ಪೂಜೆ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗುರುವಾರ ಸಂಜೆ ಗಂಟೆ ಆರರಿಂದ ನೆಲ್ಯಾಡಿ ಬೀಡು ಬಳಿ ಇರುವ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯುತ್ತದೆ.


ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಧರ್ಮೋಪದೇಶ ನೀಡುವ ಧರ್ಮಸಭೆಗೆ ಸಮವಸರಣ ಎನ್ನುತ್ತಾರೆ. ಇಲ್ಲಿ ಸಕಲ ಜೀವಿಗಳಿಗೂ ಉಪದೇಶಾಮೃತ ಕೇಳುವ ಸದವಕಾಶವಿದೆ. ಜೈನರ ಆರಾಧನಾ ಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ.


ಅಷ್ಟವಿಧಾರ್ಚನೆ, ಜಿನಭಜನೆ ಹಾಗೂ ಭಕ್ತಿಗೀತೆಗಳ ಗಾಯನವಿದೆ.


ಮೂಡಬಿದ್ರೆ ಬೆಟ್ಕೇರಿಯ ಖ್ಯಾತ ಲೇಖಕಿ ವೀಣಾ ರಘುಚಂದ್ರ ಶೆಟ್ಟಿ ಅವರನ್ನು ಗೌರವಿಸಲಾಗುವುದು.


ಪುಷ್ಪದಂತ ಭೂತಬಲಿ ವಿರಚಿತ “ಸಿದ್ಧಾಂತ ಚಿಂತಾಮಣಿ” ಕೃತಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಗುವುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top