ಭಗವದ್ಗೀತೆ ಭಾಷಣ: ರಾಜ್ಯ ಮಟ್ಟದ ಸ್ಪರ್ಧೆಗೆ ಧರಿತ್ರಿ ಭಿಡೆ ಆಯ್ಕೆ

Upayuktha
0


ಉಜಿರೆ: ಭಗವದ್ಗೀತಾ ಅಭಿಯಾನದ ಅಂಗವಾಗಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಶಿರಸಿ- ಇವರ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು, ಕಟೀಲಿನಲ್ಲಿ "ಭಗವದ್ಗೀತೆ ಒಂದು ನಿರ್ವಹಣಾ ಶಾಸ್ತ್ರ" ಎನ್ನುವ ವಿಷಯದ ಕುರಿತು ನಡೆದ ದ.ಕ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ ಧರಿತ್ರಿ ಭಿಡೆ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ಹಾಗೆಯೇ ದ್ವಿತೀಯ ವಾಣಿಜ್ಯಶಾಸ್ತ್ರದ ಸಿಂಚನಾ ಪಾಳಂದೆ ತೃತೀಯ ಬಹುಮಾನ ಪಡೆದಿದ್ದಾಳೆ. ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯಶಾಸ್ತ್ರದ ವಂದಿತಾ ಎಸ್ ರಾವ್ ತೃತೀಯ ಬಹುಮಾನ ಪಡೆದಿದ್ದಾಳೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top