ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಪರಿಷತ್ ಚುನಾವಣೆ

Upayuktha
1 minute read
0

ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆ ಬುಧವಾರ ನಡೆಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ತೃತೀಯ ಕಲಾ ವಿಭಾಗದ ವಿದ್ಯಾರ್ಥಿ ಮಂಜುನಾಥ ಜೋಡುಕಲ್ಲು, ಕಾರ‍್ಯದರ್ಶಿಯಾಗಿ ತೃತೀಯ ಬಿಕಾಂ ವಿದ್ಯಾರ್ಥಿ ರಕ್ಷಿತ್, ಹಾಗೂ ಜೊತೆ ಕಾರ‍್ಯದರ್ಶಿಯಾಗಿ ತೃತೀಯ ಬಿಸಿಎ ವಿದ್ಯಾರ್ಥಿನಿ ವಿಖ್ಯಾ ಆಯ್ಕೆಯಾದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಚುನಾವಣಾಧಿಕಾರಿಗಳಾಗಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಹಾಗೂ ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top