ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಉಡುಪಿಯ ಹೆಬ್ರಿಯಲ್ಲಿ ನಡೆದ ವಿದ್ಯಾ ಭಾರತಿ ಪ್ರಾಂತ ಹಾಗು ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟದಲ್ಲಿ ರಾಜ್ಯತಂಡವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್‌ ಎಸ್ (ಬಂಟ್ವಾಳದ ದೇವಸ್ಯ ಸೂರ್ಯನಾರಾಯಣ ಎನ್ ಕೆ ಮತ್ತು ಸುಮನ ಎಸ್‌.ಎನ್‌ ದಂಪತಿ ಪುತ್ರ) ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಋತ್ವಿಕ್ ಸಾಯಿ ಗಣೇಶ್ (ಕುಂದಾಪುರದ ಸಿದ್ದಾಪುರದ ಜನಾರ್ಧನ ಎಂ.ಆರ್ ಮತ್ತು ಜ್ಯೋತಿ ಕೆ.ಸಿ ದಂಪತಿ ಪುತ್ರ) ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top