ತೆಂಕನಿಡಿಯೂರು ಕಾಲೇಜಿನಲ್ಲಿ ಮತದಾರ ಜಾಗೃತಿ ಅಭಿಯಾನ

Upayuktha
0

ತೆಂಕನಿಡಿಯೂರು: ಜಿಲ್ಲಾಡಳಿತದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿ 18 ವರ್ಷ ತುಂಬಿದ ನೂತನ ಮತದಾರರ online registration ಹಾಗೂ EPIC ಹೊಂದಿದವರು ಆಧಾರ್ ಲಿಂಕ್ ಕುರಿತಾಗಿ SUಗಿಇಇP ಭಾಗವಾಗಿ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿಯನ್ನು ನೀಡಿದಲ್ಲದೇ ಸಂಪೂರ್ಣ ಮಾಹಿತಿಯ ವಿಡಿಯೋ ಕೂಡಾ ಮಾಡಲಾಗಿದೆ.


ಜಿಲ್ಲಾಡಳಿತದ ನಿರ್ದೇಶನದಂತೆ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಾಲೇಜು ಹಂತದ ಕನ್ನಡ ಮತ್ತು ಇಂಗ್ಲೀಷ್ ಪ್ರಬಂಧ, ಭಿತ್ತಿಚಿತ್ರ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಿ ತಾಲ್ಲೂಕು ಮಟ್ಟದ ಸ್ಪರ್ಧೆಗೆ ವಿಜೇತರನ್ನು ಕಳುಹಿಸಿಕೊಡಲಾಗಿದೆ. ನವೆಂಬರ್ 9 ರಂದು ಮತದಾರರ ಜಾಗೃತಿ ಅಭಿಯಾನವನ್ನು ನಡೆಸಲಾಗಿದ್ದು, ಜಾಥಾಗೆ ಸಂಸ್ಥೆಯ ಮುಖ್ಯಸ್ಥರಾದ ಡಾ. ಸುರೇಶ್ ರೈ ಕೆ. ಚಾಲನೆಯಿತ್ತು ಶುಭ ಹಾರೈಸಿದರೆ, ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕ ಶ್ರೀ ಪ್ರಶಾಂತ ಎನ್. ಕಾರ್ಯಕ್ರಮದ ಔಚಿತ್ಯ ವಿವರಿಸಿದರು.


ತೆಂಕನಿಡಿಯೂರು ಗ್ರಾಮ ಪಂಚಾಯತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಸುರೇಶ್ ಹಾಗೂ ಕಾರ್ಯದರ್ಶಿ ಶ್ರೀಮತಿ ವಸಂತಿ ಶೆಟ್ಟಿ ಉಪಸ್ಥಿತರಿದ್ದರು. ತದನಂತರ ವಿದ್ಯಾರ್ಥಿಗಳು ಬೈಕ್ ರ‍್ಯಾಲಿಯಲ್ಲಿ ಕಲ್ಯಾಣಪುರದಲ್ಲಿ ಜಾಗೃತಿ ಮೂಡಿಸಿದರೆ, ಸೈಕಲ್ ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಶ್ವನಾಥ ಕರಬ ಮತ್ತು ಪ್ರೌಢ ಶಾಲಾ ಹಿರಿಯ ಶಿಕ್ಷಕಿಯಾದ ಶ್ರೀಮತಿ ಪ್ರಕಾಶಿನಿ ಶುಭ ಕೋರಿ ಸೈಕಲ್ ಜಾಥಾಕ್ಕೆ ಚಾಲನೆಯಿತ್ತರು.


ಜಾಥಾ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಾಧಾಕೃಷ್ಣ, ಕನ್ನಡ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ., ಅರ್ಥಶಾಸ್ತ್ರ ಉಪನ್ಯಾಸಕ ಶ್ರೀ ಅಶೋಕ್, ರಾಜ್ಯಶಾಸ್ತ್ರ ಉದನ್ಯಾಸಕ ಶ್ರೀ ರವಿ ಚಿತ್ರಾಪುರ, ಕಛೇರಿ ಸಿಬ್ಬಂದಿಯವರು ಉಪಸ್ಥಿತರಿದ್ದು ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top