ಆಳ್ವಾಸ್: ಮತದಾನ ಜಾಗೃತಿ ಜಾಥಾ

Upayuktha
0

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತದಾರರ ಸಾಕ್ಷರತಾ ಸಂಘದ ಅಡಿಯಲ್ಲಿ ಸ್ಥಳೀಯ ಮಟ್ಟದಲ್ಲಿ ಚುನಾವಣಾ ಜಾಗೃತಿ ಮೂಡಿಸಲು ವಿಶೇಷ ಜಾಥಾ ಹಮ್ಮಿಕೊಂಡರು.


ಕಾಲೇಜಿನ ಚುನಾವಣಾ ಮತದಾರರ ಸಂಘದ ವಿದ್ಯಾರ್ಥಿಗಳು ಸ್ಥಳೀಯ ಚುನಾವಣಾ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸುವಂತೆ ಸಾರ್ವಜನಿಕರನ್ನು ಸೇರಿಸಿ, ಮತದಾನಕ್ಕೆ ಸಂಬಂಧಪಟ್ಟ ಬೀದಿನಾಟಕ ಪ್ರದರ್ಶಿಸಿ ಜಾಗೃತಿ ಮೂಡಿಸಿದರು. ಕಾಲೇಜಿನ ಕಲಾ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು, ಕಲಾ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಕಾರ‍್ಯಕ್ರಮದಲ್ಲಿ ಕಾಲೇಜಿನ ಪ್ರಾಚರ‍್ಯ ಪ್ರೋ ಎಂ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಹಾಗೂ ಕಾರ‍್ಯಕ್ರಮ ಸಂಯೋಜನಾಧಿಕಾರಿ ಸುನೀಲ್, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳು, ಸ್ಥಳೀಯರು ಭಾಗವಹಿಸಿದ್ದರು. ನೆರೆದಿದ್ದವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top