ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಶಿಕ್ಷಣ ಮಂಡಳಿ, ಉನ್ನತ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ ಮತ್ತು ಶ್ರೀನಿವಾಸ ವಿಶ್ವವಿದ್ಯಾನಿಲಯ ಮಂಗಳೂರು ಸಹಯೋಗದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್ ನಲ್ಲಿ “ಸಾಮಾಜಿಕ ಉದ್ಯಮಶೀಲತೆ, ಸುಸ್ಥಿರತೆ ಮತ್ತು ಗ್ರಾಮೀಣ ತೊಡಗಿಸಿಕೊಳ್ಳುವಿಕೆ” ಕುರಿತು ಕಾರ್ಯಾಗಾರ ನವೆಂಬರ್ 10, 2022 ರಂದು ನಡೆಯಿತು.
ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ MGNCRE ನಿರ್ದೇಶಕರಾದ ಪ್ರೊ. ಚೇತನ್ ಚಿತ್ತಾಲ್ಕರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ಮತ್ತು ಮಾನವಿಕ ಸಂಸ್ಥೆಯ ಡೀನ್ ಡಾ.ಲವೀನಾ ಡಿಮೆಲ್ಲೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಐಎಸ್ಎಸ್ಎಚ್ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ. ಪ್ರದೀಪ್ ಎಂ.ಡಿ. ವಂದಿಸಿದರು. ಸಹ ಪ್ರಾಧ್ಯಾಪಕಿ ಡಾ. ವಿದ್ಯಾ ಎನ್. ಕಾರ್ಯಕ್ರಮ ನಿರೂಪಿಸಿದರು. ಸಮಾಜ ವಿಜ್ಞಾನ ಮತ್ತು ಮಾನವಿಕ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ.ಜಾಯ್ಸನ್ ಫ್ರ್ಯಾಂಕಿ ಕಾರ್ಡೋಜಾ, ಪ್ರೊ.ಸುಶ್ಮಿತಾ, ಮತ್ತು ಪ್ರೊ.ಶ್ರೀರಾಜ್ ಎಸ್. ಆಚಾರ್ಯ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಇತರ ಸಂಸ್ಥೆಗಳ ಸುಮಾರು 45 ಅಧ್ಯಾಪಕರು ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಅನುಭವ ಹಂಚಿಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ