ತೆಂಕು ತಿಟ್ಟಿನ ಖ್ಯಾತ ಬಣ್ಣದ ವೇಷಧಾರಿ ಹರಿನಾರಾಯಣ ಭಟ್‌ ಎಡನೀರು ಅವರಿಗೆ ಕದ್ರಿ ವಿಷ್ಣು ಪ್ರಶಸ್ತಿ

Upayuktha
0


ಮಂಗಳೂರು: ತೆಂಕು ತಿಟ್ಟಿನ ಖ್ಯಾತ ಬಣ್ಣದ ವೇಷಧಾರಿ ಹರಿನಾರಾಯಣ ಭಟ್ ಎಡನೀರು ಅವರಿಗೆ ಕದ್ರಿ ಯಕ್ಷ ಬಳಗದವರು ಕೊಡಮಾಡುವ 2022 ನೇ ಸಾಲಿನ ಪ್ರತಿಷ್ಠಿತ " ಕದ್ರಿ ವಿಷ್ಣು ಪ್ರಶಸ್ತಿ" ಗೆ ಆಯ್ಕೆ ಆಗಿದ್ದಾರೆ ಎಂದು ಸಂಘಟಕ ಕದ್ರಿ ನವನೀತ ಶೆಟ್ಟಿ ಅವರು ತಿಳಿಸಿದ್ದಾರೆ.

ಶ್ರೀ ಧರ್ಮಸ್ಥಳ ಯಕ್ಷಗಾನ ಕೇಂದ್ರದಲ್ಲಿ ಕೋಳ್ಯೂರು ರಾಮಚಂದ್ರ ರಾಯರಿಂದ ನೃತ್ಯ ಕಲಿತು, ಕಟೀಲು ಮೇಳಕ್ಕೆ ಬಾಲ ಕಲಾವಿದನಾಗಿ ಸೇರಿ ಕೋಡಂಗಿ, ಬಾಲಗೋಪಾಲ ವೇಷಧಾರಿಯಾಗಿ ಹಂತಹಂತವಾಗಿ ಕಲಾಸಾಧನೆ ಮಾಡಿ ಬಣ್ಣದ ವೇಷಧಾರಿಯಾಗಿ ಸಿದ್ದಿ ಪ್ರಸಿದ್ದಿ ಪಡೆದಿರುವ ಹರಿನಾರಾಯಣ ಅವರು ಕಳೆದ 30 ವರ್ಷಗಳಿಂದ ನಿರಂತರವಾಗಿ ಶ್ರೀ ಕಟೀಲು ಮೇಳದಲ್ಲಿ ಕಲಾವ್ಯವಸಾಯ ಮಾಡುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top