ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಜಪಾನ್ ನ ಝೆನ್ಕೆನ್ ಸಂಸ್ಥೆಯ ನಡುವಿನ ಶೈಕ್ಷಣಿಕ ಒಪ್ಪಂದಕ್ಕೆ ಸಹಿ ಹಾಕುವ ಹಾಗೂ ಹಸ್ತಾಂತರಿಸುವ ಕಾರ್ಯಕ್ರಮವು ನ.24 ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಿತು. ಒಪ್ಪಂದದ ಪ್ರಮಾಣಪತ್ರಕ್ಕೆ ನಿಟ್ಟೆ ಸಂಸ್ಥೆಯ ವತಿಯಿಂದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್.ಚಿಪ್ಳೂಣ್ಕರ್ ಹಾಗೂ ಝೆನ್ಕೆನ್ ಸಂಸ್ಥೆಯ ವತಿಯಿಂದ ಜಪಾನ್ ಕೆರಿಯರ್ ಕನ್ಸಲ್ಟೆಂಟ್ ತೆರುಅಕಿ ಕಶಿವಬರ ಅವರು ಸಹಿಹಾಕಿದರು.
ಈ ಸಂದರ್ಭದಲ್ಲಿ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್, ಸ್ಟೂಡೆಂಟ್ ವೆಲ್ಫೇರ್, ಟ್ರೈನಂಗ್ ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥ ಶ್ರೀ.ಭರತ್ ಕುಮಾರ್ ಹಾಗೂ ಝೆನ್ಕೆನ್ ಸಂಸ್ಥೆಯ ಜಪಾನೀಸ್ ಲ್ಯಾಂಗ್ವೇಜ್ ಟೀಮ್ ಲೀಡ್ ತರನ ಸೊರಾತಿಯ ಉಪಸ್ಥಿತರಿದ್ದರು.
ಈ ಒಪ್ಪಂದದ ಪ್ರಕಾರ ಝೆನ್ಕೆನ್ ಸಂಸ್ಥೆಯು ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಜಪಾನ್ ಭಾಷೆ ಹಾಗೂ ಸಂಸ್ಕೃತಿ ಯ ಬಗೆಗೆ ತರಬೇತಿ ಮತ್ತು ಉದ್ಯೋಗಾವಕಾಶ ನೀಡುವಲ್ಲಿ ಸಹಕರಿಸಲಿದೆ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ತಿಳಿಸಿರುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ