ಮಂಗಳೂರು: ಶೈಕ್ಷಣಿಕ ವರ್ಷ 2022-23ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳಿಂದ ಬೇಡಿಗೆ ಬರುತ್ತಿರುವುದರಿಂದ ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾದ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಮತ್ತೊಮ್ಮೆ ಆಹ್ವಾನಿಸಲಾಗಿದೆ.
ಪ್ರವೇಶಾತಿಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುವುದು. UUCMS ಗೆ ಸಂಬAಧಿಸಿದ ಎಲ್ಲಾ ಮಾಹಿತಿಯು https://mangaloreuniveristy.ac.in/mu-uucms ನಲ್ಲಿ ಲಭ್ಯವಿದೆ. ಪ್ರವೇಶಾತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು https://uucms.karnataka.gov.in/Login/Index ನಲ್ಲಿ ಲಭ್ಯವಿರುವ UUCMS ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಮೇಲಿನ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-12-2022 ಆಗಿರುತ್ತದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ