ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಕಾರ್ಯಕ್ರಮ ಸಂಯೋಜಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


15,000 ರೂ.ಗಳು ಮಾಸಿಕ ಗೌರವಧನ ನೀಡಲಾಗುವುದು. ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಯಾವುದಾದರೊಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


2022ರ ಡಿಸೆಂಬರ್ 7ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು - 575006 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.ಸಂಖ್ಯೆ: 0824-2251254 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top