
ಮಂಗಳೂರು: 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪಿ.ಯು.ಸಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 20,000 ರೂ., ಪದವಿ ವಿದ್ಯಾರ್ಥಿಗಳಿಗೆ 25,000 ರೂ., ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30,000 ರೂ. ಹಾಗೂ ಮೆಡಿಕಲ್, ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ 35,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು.
ಡಿಸೆಂಬರ್ 31ರೊಳಗೆ ಆನ್‍ಲೈನ್ ವೆಬ್‍ಸೈಟ್: www.sw.kar.nic.in ಮೂಲಕ ಅರ್ಜಿ ಸಲ್ಲಿಸಿ, ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗೆ ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1&2) ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕುಗಳ ಕಚೇರಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ