ಮಂಗಳೂರು ವಿವಿ: ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪಿ.ಶೇಷಾದ್ರಿ

Upayuktha
0

ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯವು ನವೆಂಬರ್‌ 24 (ಗುರುವಾರ) ರಂದು ಮಧ್ಯಾಹ್ನ 2 ರಿಂದ 5.30ವರೆಗೆ ಮಂಗಳ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಬಾರಿಸು ಕನ್ನಡ ಡಿಂಡಿಮವ ಎಂಬ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕ ಪಿ ಶೇಷಾದ್ರಿ ಭಾಗವಹಿಸಲಿದ್ದಾರೆ. ಅವರು ಕನ್ನಡ ಸಾಹಿತ್ಯ ಮತ್ತು ಸಿನಿಮಾ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ. ಕುಲಪತಿಗಳಾದ ಪ್ರೊ.ಪಿ. ಎಸ್ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.


ಸಮಾರಂಭದಲ್ಲಿ ವಿವಿಯ ಪ್ರಸಾರಾಂಗ ಪ್ರಕಟಿಸಿದ ಡಾ. ಬಿ ಜನಾರ್ದನ ಭಟ್ ಅವರ 'ಕರಾವಳಿಯ ಕವಿರಾಜ ಮಾರ್ಗ' ಹಾಗೂ ಡಾ. ಸಾಯಿಗೀತಾ ಮತ್ತು ಬೆನೆಟ್ ಅಮ್ಮಣ್ಣ ಅವರು ಸಂಪಾದಿಸಿದ 'ಮಂಗಳೂರು ಸಮಾಚಾರ ಕನ್ನಡ ಸಮಾಚಾರವು' ಎಂಬ ಕೃತಿಗಳ ಬಿಡುಗಡೆ ನಡೆಯಲಿದೆ.


ಕಾರ್ಯಕ್ರಮದಲ್ಲಿ ಸುಳ್ಯದ ಭಾವನಾ ತಂಡದ ಕೆ.ಆರ್ ಗೋಪಾಲಕೃಷ್ಣ ಮತ್ತು ಬಳಗದಿಂದ ಸಂಗೀತ ಕಾರ್ಯಕ್ರಮ, ನಂದ ಗೋಕುಲ ಅರೆಹೊಳೆ ಪ್ರತಿಷ್ಠಾನ ಮಂಗಳೂರು ಇದರ ಶ್ವೇತಾ ಅರೆಹೊಳೆ ಇವರಿಂದ ಗೆಲ್ಲಿಸಬೇಕು ಅವಳ ಏಕವ್ಯಕ್ತಿ ನಾಟಕ ಪ್ರದರ್ಶನ ನಡೆಯಲಿದೆ, ಎಂದು ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top