ಮಂಗಳೂರು: ಪರಿಸರದ ಸ್ವಚ್ಛತೆ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ. ಪರಿಸರ ಸ್ವಚ್ಛವಾಗಿದ್ದರೆ ಶುದ್ಧ ಗಾಳಿ, ನೀರು, ಬೆಳಕು ದೊರಕುತ್ತದೆ. ಸ್ವಚ್ಛ ಪರಿಸರದಿಂದ ಪ್ರಜೆಗಳ ಆರೋಗ್ಯ ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮ ಜವಾಬ್ದಾರಿ ಅರಿತು ನಿರ್ವಹಿಸಿದಲ್ಲಿ ಸುದೃಢ ಮತ್ತು ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯ, ಎಲ್ಲಾ ಸಾರ್ವಜನಿಕ ಸ್ಥಳಗಳನ್ನು ನಾವು ಆಸಕ್ತಿ ವಹಿಸಿ ಶುಚಿಯಾಗಿಟ್ಟುಕೊಳ್ಳಬೇಕು. ನಮ್ಮ ಮನೆಯನ್ನು ಯಾವಾಗಲೂ ಸ್ವಚ್ಛವಾಗಿಡುವ ಹಾಗೆ ಪರಿಸರದ ಸ್ವಚ್ಛತೆಗೂ ನಾವು ಮೊದಲ ಆದ್ಯತೆ ನೀಡಬೇಕು ಎಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ ಚೂಂತಾರು ಅಭಿಪ್ರಾಯಪಟ್ಟರು.
ದಿನಾಂಕ: 30-11-2022 ನೇ ಬುಧವಾರದಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ಉಳ್ಳಾಲ ಘಟಕದ ವತಿಯಿಂದ, ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್ ಮಂಗಳೂರು ಇಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಭಾಸ್ಕರ್, ಗೃಹರಕ್ಷಕರಾದ ಸುನೀಲ್ ಪೂಜಾರಿ, ಖಾಲಿದ್, ಸಂತೋಷ್, ಧನಂಜಯ್, ಶ್ರವಣ್, ಸುರೇಂದ್ರ, ಸುಮಂತ್, ಲತೇಶ್, ದಿವ್ಯಾ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ