ಗೃಹರಕ್ಷಕರ ಸೇವೆ ಶ್ಲಾಘನೀಯ: ಬಿ.ಪಿ ದಿನೇಶ್ ಕುಮಾರ್

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ 3 ದಿನದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ ಬೋಳಾರ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಸಭಾಂಗಣದಲ್ಲಿ ದಿನಾಂಕ 15-11-2022ನೇ ಮಂಗಳವಾರದಂದು ಬೆಳಿಗ್ಗೆ ನಡೆಯಿತು.


ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಬಿ.ಪಿ ದಿನೇಶ್ ಕುಮಾರ್, ಪೊಲೀಸ್ ಉಪ ಆಯುಕ್ತರು, ಅಪರಾಧ ಮತ್ತು ಸಂಚಾರ, ಮಂಗಳೂರು ನಗರ ಇವರು ಭಾಗವಹಿಸಿದರು. ಬಹುಮಾನ ವಿತರಿಸಿ ಮಾತನಾಡಿ ಗೃಹರಕ್ಷಕರು ಮತ್ತು ಪೊಲೀಸ್ ಇಲಾಖೆಯವರು ಅಣ್ಣ ತಮ್ಮಂದಿರಿದ್ದಂತೆ. ಟ್ರಾಫಿಕ್ ನಿಯಂತ್ರಣದಲ್ಲಿ ಪೊಲೀಸರಿಗೆ ಹೆಗಲು ಕೊಟ್ಟು ಗೃಹರಕ್ಷಕರು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಟ್ರಾಫಿಕ್ ನಿಯಂತ್ರಣ ಮಾಡುವುದು ಸುಲಭವಲ್ಲ ಜನರ ಒತ್ತಡದ ನಡುವೆಯೂ ಒಳ್ಳೆಯ ಕೆಲಸ ಮಾಡುತ್ತಾರೆ ಅವರನ್ನು ನಾನು ಶ್ಲಾಘಿಸುತ್ತೇನೆ, ಅಭಿನಂದಿಸುತ್ತೇನೆ. ಅವರಿಗೂ ವರ್ಷ ವರ್ಷ ಕ್ರೀಡಾಕೂಟ ಮಾಡುವುದು ಒಳ್ಳೆಯ ಬೆಳವಣಿಗೆ ಇದರಿಂದ ಶಾರೀರಿಕ ಧೃಡತೆ ಹೆಚ್ಚುತ್ತದೆ ಕೆಲಸ ಮಾಡಲು ಹುಮ್ಮಸ್ಸು ಬರುತ್ತದೆ. ಕ್ರೀಡಾ ಕೂಟದಲ್ಲಿ ಸೋಲು ಗೆಲುವು ಸಹಜ, ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಸೋಲಿನಿಂದ ಹತಾಶರಾಗದೆ, ಗೆಲುವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ನುಡಿದರು.


ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗೆದ್ದ ಗೃಹರಕ್ಷಕ ಗೃಹರಕ್ಷಕಿಯರಿಗೆ ಅಭಿನಂದಿಸಿದರು ಹಾಗೂ ರಾಜ್ಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಆದಷ್ಟು ಹೆಚ್ಚಿನ ಪದಕಗಳನ್ನು ಗೆದ್ದು ವಲಯಕ್ಕೆ ಕೀರ್ತಿ ತರಬೇಕು ಎಂದು ಹಾರೈಸಿದರು.


ಉತ್ತರ ಕನ್ನಡ ಜಿಲ್ಲೆಯ ರಾಜೇಶ್ ಅಂಬಿಗ ಇವರು ಪುರುಷರ ವಿಭಾಗದ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸಂಧ್ಯಾ ಇವರು ಮಹಿಳೆಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿರುತ್ತಾರೆ ಹಾಗೂ ಸಮಗ್ರ ಟೀಂ ಚಾಂಪಿಯನ್ ಶಿಪ್ ಅನ್ನು ಚಿಕ್ಕಮಗಳೂರು ಜಿಲ್ಲೆಯವರು ಪಡೆದಿರುತ್ತಾರೆ.


ಗೌರವ ಉಪಸ್ಥಿತರಾಗಿ ರಾಮ ಲಕ್ಷ್ಮೀನಾರಾಯಣ ಕನ್ವೆನ್‌ಷನ್ ಹಾಲ್ ಎಮ್ಮೆಕೆರೆ ಇದರ ನಿರ್ದೇಶಕರಾದ ಶ್ರೀ ಪರೀಕ್ಷಿತ್ ರೈ, ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಭಾಸ್ಕರ್ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಪ ಸಮಾದೇಷ್ಟರಾದ ಶ್ರೀ ರಮೇಶ್ ಅವರು ಸ್ವಾಗತಿಸಿದರು, ಗೃಹರಕ್ಷಕರಾದ ಎಚ್. ಸಿ ಚಂದ್ರಶೇಖರ ಪ್ರಾರ್ಥನೆಗೈದರು, ಮಂಗಳೂರು ಘಟಕದ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.


ಈ ಸಂದರ್ಭದಲ್ಲಿ ಕಛೇರಿಯ ಅಧೀಕ್ಷಕರಾದ ಶ್ರೀ ರತ್ನಾಕರ, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್ ಹಾಗೂ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top