ಸಮ್ಮೇಳನಾದ್ಯಕ್ಷ ಕೆ ಆರ್ ಗಂಗಾಧರ್ ಅವರಿಗೆ ಚಂದನ ಸಾಹಿತ್ಯ ವೇದಿಕೆಯಿಂದ ಸನ್ಮಾನ

Chandrashekhara Kulamarva
0

ಸುಳ್ಯ: ತಾಲೂಕು ಕಸಾಪ ವತಿಯಿಂದ ಇದೇ ಬರುವ ಡಿಸೇಂಬರ್ 10 ರಂದು ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ನಡೆಯುವ 26 ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳು, ಜೇಸಿ ತರಬೇತುದಾರರು ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಕೆ ಆರ್ ಗಂಗಾಧರ್ ಅವರನ್ನು ಅವರ ಸ್ವಗೃಹದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಎಚ್ ಭೀಮರಾವ್ ವಾಷ್ಠರ್ ರವರು ಕೆ ಆರ್ ಜಿ ಅವರನ್ನು ಸನ್ಮಾನಿಸಿ ಸನ್ಮಾನ ನುಡಿಗಳನ್ನು ಮಾತಾಡಿದರು. ಈ ಸಂದರ್ಭದಲ್ಲಿ ಕವಿ ಮತ್ತು ಗಾಯಕರಾದ ಪೆರುಮಾಳ್ ಲಕ್ಷ್ಮಣ್ ಐವರ್ನಾಡು, ಹಿರಿಯರಾದ ಗುರುಸ್ವಾಮಿಗಳಾದ ಸುರೇಶ್ ಉಬರಡ್ಕ ಮತ್ತು ಯುವಕವಿ ಪವನ್ ಕಲ್ಲುಮುಟ್ಲು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top