
ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ವಿಭಾಗವು ಐಇಇಇ ಸಿಗ್ನಲ್ ಪ್ರೊಸೆಸಿಂಗ್ ಸೊಸೈಟಿ, ಬೆಂಗಳೂರು ಚಾಪ್ಟರ್ ಇದರ ಸಹಯೋಗದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನ.14 ರಿಂದ ಐದು ದಿನಗಳ 'ಸಿಗ್ನಲ್ ಪ್ರೊಸೆಸಿಂಗ್ ಫಾರ್ ಬಯೋಮೆಡಿಕಲ್ ಎಪ್ಲಿಕೇಶನ್ಸ್' ಎಂಬ ವಿಷಯದ ಬಗೆಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ.
ಈ ಕಾರ್ಯಕ್ರಮವನ್ನು ನ.14 ರಂದು ಹರ್ಮನ್ ಇಂಟರ್ನ್ಯಾಶನಲ್ ಸಂಸ್ಥೆಯ ಅಟೊಮೊಟಿವ್ ಆಡಿಯೋ ಸಾಫ್ಟ್ ವೇರ್ ವಿಭಾಗದ ನಿರ್ದೇಶಕ ಹಾಗೂ ಐಇಇಇ ಸಿಗ್ನಲ್ ಪ್ರೊಸೆಸಿಂಗ್ ಸೊಸೈಟಿ, ಬೆಂಗಳೂರು ಚಾಪ್ಟರ್ ನ ಮುಖ್ಯಸ್ಥ ಶ್ರೀ ಶೈಲೇಶ್ ಸಕ್ರಿ ಉದ್ಘಾಟಿಸಲಿರುವರು.ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಐಇಇಇ ಸಿಗ್ನಲ್ ಪ್ರೊಸೆಸಿಂಗ್ ಸೊಸೈಟಿ, ಬೆಂಗಳೂರು ಚಾಪ್ಟರ್ ನ ವೈಸ್ ಚೇರ್ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಸಚಿವೆ ಡಾ.ರೇಖಾ ಭಂಡಾರ್ಕರ್ ಕಾರ್ಯಕ್ರಮವನ್ನು ಸಂಯೋಜಿಸಲಿರುವರು. ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗದ ಸಿಗ್ನಲ್ ಪ್ರೊಸೆಸಿಂಗ್ ತಜ್ಞರಿಂದ ವಿವಿಧ ವಿಷಯಗಳ ಬಗೆಗೆ ದಿಕ್ಸೂಚಿ ಭಾಷಣಗಳನ್ನೂ ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಿಟ್ಟೆ ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ