ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ವಿವಿಯ ಕನ್ನಡ , ಸಮಾಜ ಕಾರ್ಯ ವಿಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ಸಹಯೋಗದಲ್ಲಿ 2022-23ನೇ ಸಾಲಿನ ‘ಕನಕ ತತ್ತ್ವಚಿಂತನʼ ಪ್ರಚಾರೋಪನ್ಯಾಸ ಮಾಲಿಕೆಯ ಉದ್ಘಾಟನೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವು ಮಂಗಳೂರು ವಿಶ್ವ ವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಭಾಂಗಣದಲ್ಲಿ 18 ನವೆಂಬರ್ 2022, ಶುಕ್ರವಾರ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಕಿಶೋರ್ ಕುಮಾರ್ ಸಿ.ಕೆ. ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ವಿದ್ವಾಂಸರು, ಕನಕಶ್ರೀ ಪ್ರಶಸ್ತಿ ಪುರಸ್ಕೃತರು ಆದ ಪ್ರೊ. ಎ.ವಿ. ನಾವಡ ವಹಿಸಲಿದ್ದಾರೆ. ‘ಕನಕದಾಸರ ನೂತನ ಪದ ಪ್ರಯೋಗ’ ಎಂಬ ವಿಷಯದ ಕುರಿತು ಮೊದಲ ಉಪನ್ಯಾಸವನ್ನು ವಿದ್ವಾಂಸರು, ಕನಕಶ್ರೀ ಪ್ರಶಸ್ತಿ ಪುರಸ್ಕೃತರು ಆದ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ನೀಡಲಿರುವರು.
ಕನಕದಾಸರ ಕೀರ್ತನೆಗಳಲ್ಲಿ ವೈದ್ಯಕೀಯ ಅಂಶಗಳು’ ಎಂಬ ವಿಷಯದ ಕುರಿತು ಮೈಸೂರು ವಿಶ್ವವಿದ್ಯಾನಿಲಯ ಪ್ರಸಾರಾಂಗದ ಸಹಾಯಕ ನಿರ್ದೇಶಕರಾದ ಡಾ. ಬಿ.ಎಸ್. ಅನಿಲ್ ಕುಮಾರ್ ಬೊಮ್ಮಾಘಟ್ಟ ನೀಡಲಿರುವರು. ಮಂಗಳೂರು ವಿಶ್ವವಿದ್ಯಾನಿಲಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ. ಸೋಮಣ್ಣ ಹೊಂಗಳ್ಳಿ, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಅಧ್ಯಕ್ಷರಾದ ಡಾ. ಪೌಲ್ ಜಿ. ಅಕ್ವಿನಸ್, ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಧನಂಜಯ ಕುಂಬ್ಳೆ ಉಪಸ್ಥಿತಲಿರುವರು. ಕಾರ್ಯಕ್ರಮದಲ್ಲಿ ಇರಾದ ಕೊಳಲು ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಕನಕ ಕೀರ್ತನ ಗಾಯನ ಕಾರ್ಯಕ್ರಮವಿದೆ ಎಂದು ಕನಕದಾಸ ಸಂಶೋಧನ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ