ಗೃಹರಕ್ಷಕದಳ ಕಛೇರಿಯಲ್ಲಿ ಐಕ್ಯತಾ ಪ್ರಮಾಣ ಸ್ವೀಕಾರ

Upayuktha
0

ಮಂಗಳೂರು: ರಾಷ್ಟ್ರದ ಸ್ವಾತಂತ್ರ ಹಾಗೂ ಐಕ್ಯತೆಯನ್ನು ಬಲಪಡಿಸಲು ದೇಶದಲ್ಲಿ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ಹತ್ತಿಕ್ಕಲು ಹಾಗೂ ತಡೆಗಟ್ಟುವ ಸದ್ದುದೇಶದಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು 19-11-2022 ರಿಂದ 25-11-2022 ರವರೆಗೆ ಸರಕಾರದ ಎಲ್ಲಾ ಕಛೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಐಕ್ಯತಾ ಸಪ್ತಾಹವನ್ನು ಆಚರಿಸಲಾಯಿತು.


ದ.ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಐಕ್ಯತಾ ಪ್ರಮಾಣವನ್ನು ಭೋಧಿಸಿದರು. ನಂತರ ಮಾತನಾಡಿದ ಅವರು, ರಾಷ್ಟ್ರದ ಐಕ್ಯತೆ ಮತ್ತು ಸ್ವಾತಂತ್ರವನ್ನು ಬಲಪಡಿಸಲು ಹಾಗೂ ಸಂರಕ್ಷಿಸಲು ಪ್ರತಿಯೊಬ್ಬರೂ ಸಮರ್ಪಣಭಾವದಿಂದ ಶ್ರದ್ಧಾಪೂರ್ವಕವಾಗಿ ಕೆಲಸ ಮಾಡಬೇಕಾಗಿದೆ. ಯಾವುದೇ ಜಾತಿ, ಮತ, ಭಾಷೆ, ಪ್ರದೇಶ, ರಾಜಕೀಯ ಅಥವಾ ಆರ್ಥಿಕ ಕುಂದು ಕೊರತೆಗಳ ಬಗೆಗಿನ ಭಿನ್ನಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಮತ್ತು ಸಂವಿಧಾನಾತ್ಮಕವಾದ ರೀತಿಯಲ್ಲಿ ಬಗೆ ಹರಿಸತಕ್ಕದ್ದು. ಈ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಕರೆ ನೀಡಿದರು.


ಈ ಸಂದರ್ಭದಲ್ಲಿ ಉಪ ಸಮಾದೇಷ್ಟರಾದ ಶ್ರೀ ರಮೇಶ್, ಕಛೇರಿ ಅಧೀಕ್ಷಕರಾದ ಶ್ರೀ ರತ್ನಾಕರ ಗೃಹರಕ್ಷಕರಾದ ದಿವಾಕರ್, ಸುನೀಲ್, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top