ಮಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವುಗಳ ಜಂಟಿ ಆಶ್ರಯದಲ್ಲಿ ಕವಿಗೋಷ್ಠಿ ಏರ್ಪಡಿಸಲಾಗಿತ್ತು.
ಪ್ರಾಂಶುಪಾಲ ಡಾ. ತಾರಾನಾಥ ಕವಿಗೋಷ್ಠಿ ಉದ್ಘಾಟಿಸಿದರು. ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜು ಚಂದ್ರಗಿರಿ ರಾಜ್ಯೋತ್ಸವ ಭಾಷಣ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರಕಾರಿ ಸಮಿತಿಯ ಸದಸ್ಯ ಡಾ. ಮಾಧವ ಎಂ. ಕೆ. ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ನರೇಶ್ ಮಲ್ಲಿಗೆ ಮಾಡು ಸ್ವಾಗತಿಸಿ, ಪ್ರೊ.ಪುಷ್ಪರಾಜ್ ಕೆ. ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಉದಯೋನ್ಮುಖ ಕವಿಗಳಿಂದ ಕವನ ವಾಚನ ನಡೆಯಿತು. ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶರತ್ ಕುಮಾರ್ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಅಂತರ್ ಕಾಲೇಜು ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


