ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ಗೀತೆಗಳ ಕಾರ್ಯಾಗಾರವು ಜರುಗಿತು.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಪ್ರಿನ್ಸಿಯಾ ಫೆರ್ನಾಂಡಿಸ್, ಕೃಷ್ಣರಾಜ ಪಡ್ವೆಟ್ನಾಯ, ರಿಯಾ ಹಾಗೂ ಅಂಜನಾ ಅವರು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಕಾರ್ಯಾಗಾರ ನಡೆಯಿಸಿ ವಿವಿಧ ಗೀತೆಗಳನ್ನು ಪ್ರಸ್ತುತಪಡಿಸಿದರು.
ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಧನ್ಯವಾದ ಅರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ