ಪುತ್ತೂರು: ರಾಜಸ್ತಾನದ ಜೋಧಪುರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ ಪ್ರಥಮ ಸ್ಥಾನ ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ.
ಈತನು ಪುತ್ತೂರು ಬೊಳುವಾರಿನ ಪ್ರತಾಪ್ ಸಿಂಹ ವರ್ಮ ಹಾಗೂ ವೀಣಾ ಕುಮಾರಿ ದಂಪತಿಯ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ