ಅಂತರಕಾಲೇಜು ಪುರುಷರ ಖೋಖೋ ಚಾಂಪಿಯನ್‍ಶಿಫ್- ಆಳ್ವಾಸ್ ತಂಡ ಸತತ 14ನೇ ಬಾರಿ ಸಮಗ್ರ ಪ್ರಶಸ್ತಿ

Upayuktha
0


ಮೂಡುಬಿದಿರೆ: ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ  ‘ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿ'ಯ  ಅಂತರಕಾಲೇಜು  ಪುರುಷರ ಖೋಖೋ ಚಾಂಪಿಯನ್‍ಶಿಫ್‍ನಲ್ಲಿ ಆಳ್ವಾಸ್ ತಂಡ ಸತತ 14ನೇ ಬಾರಿ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು.  


ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ ಮಂಗಳೂರು ವಿವಿಯ 25 ಕಾಲೇಜುಗಳು ಭಾಗವಹಿಸಿದ್ದವು. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಚಾರ್ಯ  ಮಧು ಜಿ.ಆರ್ ಹಾಗೂ ಜಡ್ಕಲ್‍ನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೆಶಕ ಶೇಶಪ್ಪ ಗೌಡ ಉಪಸ್ಥಿತರಿದ್ದರು.


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top