ಕುಂಜತ್ತೋಡಿ: ಎನ್ಎಸ್ಎಸ್ ನಲ್ಲಿ ಕಲಿತ ಕೌಶಲ್ಯಗಳು ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು. ಅಂತೆಯೇ ದೇಶದ ಅಭಿವೃದ್ಧಿಗಾಗಿ ಭಾರತೀಯ ಸೇನೆಗೆ ಸೇರಿಕೊಳ್ಳಬೇಕೆಂದು ಭಾರತೀಯ ಸೇನೆಯ ನಿವೃತ್ತ ಸುಬೇದಾರ್ ಪಿ. ಜಗನ್ನಾಥ ಶೆಟ್ಟಿ ಅವರು ಹೇಳಿದರು.
ಅವರು ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಪುಂಜಾಲಕಟ್ಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ನೆಸ್ಸೆಸ್ ಘಟಕಗಳ ವಿಶೇಷ ವಾರ್ಷಿಕ ಶಿಬಿರದ ಏಳನೇ ದಿನವಾದ ಮಂಗಳವಾರ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ ಶರತ್ ಕುಮಾರ್ ಇವರು ಎನ್ಎಸ್ಎಸ್ ನ ಅನುಭವವನ್ನು ಮೆಲುಕು ಹಾಕಿ ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು. ಮಡಂತ್ಯಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಂಗೀತ ಎಸ್. ಶೆಟ್ಟಿ, ಮಡಂತ್ಯಾರು ಗ್ರಾಮ ಪಂಚಾಯತ್ ಪಿಡಿಓ ಪುರುಷೋತ್ತಮ್ ಜಿ., ಗ್ರಾ.ಪಂ. ಸದಸ್ಯ ಶೈಲೇಶ್ ಕುಮಾರ್ ಪಿ., ಕುಂಜತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷೆ ಶ್ರೀಮತಿ ನಸೀಮ ಬಾನು ಹಾಗೂ ಪ್ರಸ್ತುತ ಎಸ್‌ಡಿಎಂಸಿ ಅಧ್ಯಕ್ಷ ಶಶಿಕಿರಣ್, ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸಬೀನಾ ಮತ್ತು ನಿವೃತ್ತ ಪ್ರಾಂಶುಪಾಲ ಗಣಪತಿ ಭಟ್ ಕುಳಮರ್ವ ಇವರು ಹಿತನುಡಿಯನ್ನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಜತ್ತೋಡಿ ಇಲ್ಲಿನ ಎಸ್‌ಡಿಎಂಸಿ ಸದಸ್ಯರು ಮತ್ತು ಬೋಧಕ ಬೋಧಕೇತರ ವೃಂದದವರು, ಯೋಜನಾಧಿಕಾರಿಗಳಾದ ಸಂತೋಷ್ ಪ್ರಭು, ಶ್ರೀಮತಿ ಚಿತ್ರಾ ಪಡಿಯಾರ್ ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ರೂಪೇಶ್ ಸ್ವಾಗತಿಸಿ, ಕು.ಹೃತಿಕ ಮತ್ತು ಕು. ಚಂದ್ರಿಕಾ ನಿರ್ವಹಿಸಿದರು. ಯೋಜನಾಧಿಕಾರಿಯಾದ ಶ್ರೀಮತಿ ಚಿತ್ರಾ ಪಡಿಯಾರ್ ಅವರು ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ