ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದಲ್ಲಿ ದೀಪೋತ್ಸವ, ಸಂಗೀತ ಕಾರ್ಯಕ್ರಮ

Chandrashekhara Kulamarva
0

ಬೆಂಗಳೂರು: ನಗರದ ಕೆ.ಪಿ. ಅಗ್ರಹಾರದಲ್ಲಿರುವ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದಲ್ಲಿ ಡಿಸೆಂಬರ್ 6 ರಂದು ಏರ್ಪಡಿಸಿದ್ದ ವಿಶೇಷ ದೀಪೋತ್ಸವಕ್ಕೆ ಮಾಜಿ ಸಚಿವ ಮಾಲೂರು ಎಸ್. ಎನ್. ಕೃಷ್ಣಯ್ಯಶೆಟ್ಟಿ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ನಾಡಿನ ಹೆಸರಾಂತ ಗಾಯಕಿಯಾದ ವಿದುಷಿ ಶ್ರೀಮತಿ ದಿವ್ಯಾ ಗಿರಿಧರ್ ಮತ್ತು ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಿತ್ತು. ಶ್ರೀಮತಿ ಸುನೀತಾ ಕೃಷ್ಣಯ್ಯಶೆಟ್ಟಿ ಅವರು ಶ್ರೀಮತಿ ದಿವ್ಯಾ ಗಿರಿಧರ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು  ಕೃಷ್ಣಯ್ಯಶೆಟ್ಟರು ವಹಿಸಿಕೊಂಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top