ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಕ್ತದಾನ ಶಿಬಿರ

Upayuktha
0

ಉಜಿರೆ: ಶ್ರೀ ಧ. ಮಂ ಕಾಲೇಜಿನ ಎನ್ಎಸ್ಎಸ್ ಘಟಕದ ನೇತೃತ್ವದಲ್ಲಿ ಯೂಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ & ರೋವರ್ಸ್, ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿ ಆಶ್ರಯದಲ್ಲಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ, ಮಂಗಳೂರು ಮತ್ತು ಎಸ್.ಡಿ.ಎಂ. ಆಸ್ಪತ್ರೆ, ಉಜಿರೆ ಸಹಯೋಗದೊಂದಿಗೆ ದಿನಾಂಕ 15-12-2022 ರಂದು ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ರೋಗವಿಜ್ಞಾನ ವಿಭಾಗದ ವ್ಯವಸ್ಥಾಪಕ ನಿರ್ದೇಶಕಿ ಡಾ. ತೇಜಸ್ವಿನಿಯವರು ಮಾತನಾಡಿ,‌ "ರಕ್ತವನ್ನು ಕೃತಕವಾಗಿ ತಯಾರು ಮಾಡಲು ಆಗುವುದಿಲ್ಲ. ಒಂದು ಯೂನಿಟ್ ರಕ್ತದಿಂದ 3 ಜೀವಗಳನ್ನು ಉಳಿಸಬಹುದು. ಆದ್ದರಿಂದಾಗಿ, ರಕ್ತದಾನ ಮಾಡಲು ನಾವು ಜನರನ್ನು ಪ್ರೇರೇಪಿಸಬೇಕು" ಎಂದು ರಕ್ತದಾನದ ಮಹತ್ವವನ್ನು ತಿಳಿಸಿದರು.


ಶಿಬಿರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 223 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.


ಈ ಸಂದರ್ಭ ಎನ್ಎಸ್ಎಸ್ ಯೋಜನಾಧಿಕಾರಿಗಳಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್ ಹಾಗೂ ಶ್ರೀಮತಿ ದೀಪ ಆರ್ ಪಿ, ಯೂಥ್ ರೆಡ್ ಕ್ರಾಸ್ ಸಂಯೋಜಕರಾದ ಶ್ರೀಮತಿ ಪೂಜಿತ ವರ್ಮ, ರೇಂಜರ್ಸ್ & ರೋವರ್ಸ್ ಅಧಿಕಾರಿಗಳಾದ ಶ್ರೀ ಪ್ರಸಾದ್ ಕುಮಾರ್ ಹಾಗೂ ಡಾ. ರತ್ನಾವತಿ ಕೆ ಹಾಗೂ ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿಗಳ ಸಂಯೋಜಕರು ಉಪಸ್ಥಿತರಿದ್ದರು.


ಎನ್ಎಸ್ಎಸ್ ಸ್ವಯಂಸೇವಕರಾದ ನವನೀತ್ ಕೃಷ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅನನ್ಯ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top