ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ದಿನಾಂಕ: 04-12-2022ನೇ ಭಾನುವಾರದಂದು ಪಣಂಬೂರು ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರು ಅವರು ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ನಾವು ಸ್ವಚ್ಛವಾಗಿಟ್ಟುಕೊಂಡರೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ಸ್ವಚ್ಛ ಸುಂದರ ಪರಿಸರದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ . ಪರಿಸರವನ್ನು ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯವಸ್ತುಗಳಿಂದ ಮಲಿನಗೊಳಿಸುವಲ್ಲಿ ಜೈವಿಕ ಸರಪಳಿ ಕಳಚಿಕೊಂಡು ಪರಿಸರದಲ್ಲಿ ಅಸಮತೋಲನ ಉಂಟಾಗಿ ಹತ್ತು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಸಾಮಾಜಿಕ ಹೊಣೆಗಾರಿಕೆ ಇದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಪಣಂಬೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಜಗದೀಶ್, ಪ್ರಶಾಂತ್, ರಾಕೇಶ್, ದಿನೇಶ್, ಮಹೇಶ್, ಪ್ರಕಾಶ್, ಮಂಜುನಾಥ, ಹರಿಶ್ಚಂದ್ರ, ಪ್ರತಾಪ್, ಜೆನಿಫರ್, ಬೇಬಿ ಮತ್ತು ಪ್ರೇಮ ಉಪಸ್ಥಿತರಿದ್ದರು.