ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಸಿಎಂ

Upayuktha
0

ಸ್ಕೌಟ್ಸ್ - ಗೈಡ್ಸ್ ನಿಂದ ಸಂಸ್ಕೃತಿಯ ಉಳಿವು: ಬಸವರಾಜ ಬೊಮ್ಮಾಯಿ


ಮೂಡುಬಿದಿರೆ: ಭಾರತದ ಭವಿಷ್ಯ ಸಂಸ್ಕ್ರತಿಯ ಉಳಿವಿಕೆಯ ಮೇಲೆ ನಿರ್ಧರಿತವಾಗಿದೆ. ಸ್ಕೌಟ್ಸ್- ಗೈಡ್ಸ್ ಸಂಸ್ಥೆ ಸದಾ ಸಂಸ್ಕೃತಿಯ ಉಳಿವಿಗೆ ಶ್ರಮಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.


ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಐದನೇ ದಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ವಿದ್ಯೆ ಜತೆಗೆ ಬೌದ್ಧಿಕ ಜ್ಞಾನ ಅಗತ್ಯ. ಶಿಸ್ತು, ಜೀವನ ಮೌಲ್ಯವನ್ನು ಸಮಂಜಸವಾಗಿ ತಿಳಿಸಿದರೇ ಮಗು ಭವಿಷ್ಯದಲ್ಲಿ ಉತ್ತಮ ನಾಗರೀಕನಾಗುತ್ತಾನೆ. ಈ ನಿಟ್ಟಿನಲ್ಲಿ ಹುಟ್ಟಿಕೊಂಡ ಸ್ಕೌಟ್ಸ್ - ಗೈಡ್ಸ್ ಸಂಸ್ಥೆ ಇದೀಗ ಸಂಸ್ಕೃತಿ ಬಿಂಬಿಸುವ ಹಲವು ಕಾರ್ಯಕ್ರಮವನ್ನು ಏರ್ಪಡಿಸುತ್ತಿದ್ದೆ. ಈ ಮೂಲಕ ಭಾರತೀಯ ಪರಂಪರೆಯ ಉಳಿವಿಕೆಗೆ ಹಾಗೂ ಭವ್ಯ ಭಾರತ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದೆ. ಈ ಮೂಲಕ ಸಂಸ್ಕೃತಿಯ ಚಳುವಳಿ ಆರಂಭಿಸಿದ್ದಾರೆ ಎಂದರು.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ. ಇದು ಮಗುವು ಉತ್ತಮ ಸಾಧಕನಾಗಲು ಎಡೆಮಾಡಿಕೊಡುತ್ತದೆ. ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಮಕ್ಕಳಿಗೆ ಗೌರವಯುತ ಜೀವನ ನಡೆಸಲು ಬೇಕಾದ ಮೌಲ್ಯವನ್ನು ನಿರ್ದೇಶಿಸುತ್ತಿದೆ ಇದು ಸಂಸ್ಥೆಗೆ ಹೆಮ್ಮೆ ಎಂದರು.


ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಆರತಿ ಮಾಡುವ ಮೂಲಕ ಗೌರವಿಸಿ ಸನ್ಮಾನಿಸಲಾಯಿತು. ಆಳ್ವಾಸ್ ಸಾಂಸ್ಕೃತಿಕ ವಿದ್ಯಾರ್ಥಿಗಳು ಗೌರವದ ಆರತಿ ಎಂಬ ಹಾಡನ್ನು ಹಾಡಿದರು. ಉದ್ಯಮಿ ಶ್ರೀಪತಿ ಭಟ್ ಕುಟುಂಬವೂ ಶಾಲು ಹೊದಿಸಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರ ಬೆಳ್ಳಿಯ ಚಿತ್ರ ಪಟ ಉಡುಗೊರೆ ನೀಡಿ ವಿಶೇಷ ಗೌರವ ಸೂಚಿಸಿದರು.


ಕಾರ್ಯಕ್ರಮದಲ್ಲಿ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್, ಕರ್ನಾಟಕ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಕ್ರೀಡಾ ಸಚಿವ ನಾರಯಣ ಗೌಡ, ಭಾರತ್ ಸ್ಕೌಟ್ಸ್ -ಗೈಡ್ಸ್ ಅಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಅನಿಲ್ ಕುಮಾರ್ ಜೈನ್. ಕರ್ನಾಟಕ ರಾಜ್ಯ ಸ್ಕೌಟ್ಸ್ ಗೈಡ್ಸ್ ಆಯುಕ್ತ ಪಿ.ಜಿ ಆರ್ ಸಿಂದ್ಯಾ, ಪಶ್ಚಿಮ ವಲಯದ ಐಜಿಪಿ ಡಾ. ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಜಿಲ್ಲಾಧಿಕಾರಿ ರವಿ ಕುಮಾರ್ ಎಂ ಆರ್, ಉದ್ಯಮಿ ಶ್ರೀಪತಿ ಭಟ್, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ನಿರೂಪಿಸಿ, ವಂದಿಸಿದರು.


"ಮಂಗಳೂರಿನ ಪಿಲಿಕುಳದಲ್ಲಿ ಯುವ ಶಕ್ತಿ ಕೇಂದ್ರ ನಿರ್ಮಿಸುವ ಗುರಿಯಿದ್ದು, ಜಾಂಬೂರಿಯ ನೆನಪಿಗಾಗಿ 15 ಎಕರೆ ಜಾಗದಲ್ಲಿ ಯುವಶಕ್ತಿ ಕೇಂದ್ರ ನಿರ್ಮಿಸಲಾಗುವುದು"

- ಡಾ. ಎಂ. ಮೋಹನ್ ಆಳ್ವ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top