ಕೆನರಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Upayuktha
0

ಮಂಗಳೂರು: ಕೆನರಾ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ದಯಾನಂದ ನಾಯ್ಕ ಅವರು  ಅತಿಥಿಗಳಾಗಿ ಆಗಮಿಸಿದ್ದು ಇಂದಿನ ಸನ್ನಿವೇಶದಲ್ಲಿ ಭಾರತದಲ್ಲಿ ಸಂವಿಧಾನದ ಮೌಲ್ಯಗಳ ಮಹತ್ವದ ಬಗ್ಗೆ ಮಾತನಾಡುತ್ತಾ ಈ ದೇಶದ ಪ್ರಜೆಯು ತನ್ನ ಜೀವನದ ಪ್ರತಿ ಹಂತದಲ್ಲಿಯೂ ಕೂಡ ಸಂವಿಧಾನದ ಕಾನೂನಿನ ಚೌಕಟ್ಟಿನೊಳಗೆ ವ್ಯವಹರಿಸುತ್ತಾನೆ. ದೇಶದ ಸಂವಿಧಾನವನ್ನು ಗೌರವಿಸುವ ಪ್ರತಿಯೊಬ್ಬ ವ್ಯಕ್ತಿ ಸ್ವಚ್ಛಂದದಿಂದ ಜೀವನ ನಡೆಸಲು ಅವಕಾಶ ಮಾಡಿಕೊಡುತ್ತದೆ ಎಂದರು.


ಪ್ರಾಂಶುಪಾಲೆ ಡಾ. ಪ್ರೇಮಲತಾ. ವಿ ಅವರು ಅಧ್ಯಕ್ಷತೆ ವಹಿಸಿದ್ದು ಹಿಂದಿನ ಕಾಲದಲ್ಲಿ ಸಮಾಜ ತಪ್ಪಿತಸ್ಥರನ್ನು ದೂರ ಇಡುತ್ತಿದ್ದರು. ಆದರೆ ಇಂದಿನ ಸಮಾಜ ತಪ್ಪು ಮಾಡಿದವರನ್ನು ಸ್ವೀಕರಿಸಿ ಗೌರವಿಸುತ್ತದೆ ಎಂದರು.


'ಮಾನವ ಹಕ್ಕು ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ಸಂಘ'ದ ಸಂಚಾಲಕರಾದ ಡಾ. ಗಣೇಶ್ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿ ನಿಯರಾದ ಖಾಶ್ವಿ ಕರ್ಕೇರ ಮತ್ತು ತಂಡ ಪ್ರಾರ್ಥಿಸಿ, ಅನುಷಾ ಸ್ವಾಗತಿಸಿದರು. ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ನಿಶ್ವಿತಾ ಶೆಟ್ಟಿ ಅವರು ವಂದಿಸಿದರು. ಕುಮಾರಿ ಪ್ರಿಯಾಂಕ ನಿರೂಪಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಶ್ರೀಮತಿ ರಕ್ಷಿತಾ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top