ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಡಿ.14

Chandrashekhara Kulamarva
0



ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ 2022-23ರ ಉದ್ಘಾಟನಾ ಸಮಾರಂಭ ಇದೇ ಡಿ. 14ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.


ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ ಎಸ್. ಅವರು ಘನ ಉಸ್ಥಿತಿ ವಹಿಸುವರು.

ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅಥಿತಿಗಳಾಗಿ ರಾಜ್ಯ ಸಭಾ ಸಂಸದರಾದ ಡಾ. ಡಿ. ವಿರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ., ರಾಜೇಶ್ ನಾಯ್ಕ್ ಯು., ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಬಿ.ಎಂ. ಫಾರೂಕ್, ಆಯನೂರು ಮಂಜುನಾಥ್, ಕೆ. ಪ್ರತಾಪ ಸಿಂಹ ನಾಯಕ್ ಹಾಗೂ ಮಂಜುನಾಥ ಭಂಡಾರಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ಮಂಗಳೂರು ಮಹಾಪೌರ ಜಯಾನಂದ ಅಂಚನ್ ಹಾಗೂ ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಎಂ. ಆಚಾರ್ ಭಾಗವಹಿಸುವರು.


ಡಿ.15ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Post a Comment

0 Comments
Post a Comment (0)
To Top