ಸಿರಿ ಕೇಂದ್ರ ಕಛೇರಿಗೆ ಮಾತೃಶ್ರೀ ಡಾ|| ಹೇಮಾವತಿ ವೀ ಹೆಗ್ಗಡೆಯವರ ಭೇಟಿ: ಸಿರಿ ಸಿಬ್ಬಂದಿಗಳಿಂದ ಗೌರವಾರ್ಪಣೆ

Upayuktha
0

 


ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರಾದ ಮಾತೃಶ್ರೀ ಡಾ|| ಹೇಮಾವತಿ ವೀ ಹೆಗ್ಗಡೆಯವರು ಡಿ.7ರಂದು ಸಿರಿ ಕೇಂದ್ರ ಕಛೇರಿ ಉಜಿರೆಗೆ ಭೇಟಿ ನೀಡಿದರು.


ಸಿರಿ ಸಂಸ್ಥೆಯಲ್ಲಿರುವ ವಿವಿಧ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿದ ಅವರು, ವಿವಿಧ ಉತ್ಪನ್ನಗಳ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಿರಿ ಸಿಬ್ಬಂದಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಮುಖ್ಯ ನಿರ್ವಹಣಾಧಿಕಾರಿ ಶ್ರೀ ಅನಿಲ್ ಕುಮಾರ್‍ಎಸ್.ಎಸ್,ಸಿರಿ ಸಂಸ್ಥೆಯ ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ನಿರ್ದೇಶಕರಾದ ಶ್ರೀ ಪ್ರಸನ್ನ, ಜ್ಞಾನ ವಿಕಾಸ ವಿಭಾಗದ ನಿರ್ದೇಶಕರಾದ ಶ್ರೀ ವಿಠ್ಠಲ ಪೂಜಾರಿ, ಎಸ್.ಕೆ.ಡಿ.ಆರ್.ಡಿ.ಪಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಶ್ರೀ ಸುರೇಂದ್ರ, ಶ್ರೀಮತಿ ಸೋನಿಯಾ ಯಶೋವರ್ಮ ಹಾಗೂ ಸಿರಿ ಸಂಸ್ಥೆಯಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಮಾತೃಶ್ರೀಯವರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಗೌರವಾರ್ಪಣೆ ಸಲ್ಲಿಸಿದರು.


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top