ಜಾರ್ಖಂಡ್‌ನ ಸಮ್ಮೇದ ಶಿಖರ್ಜಿ ಪ್ರವಾಸಿ ಸ್ಥಳಗಳ ಪಟ್ಟಿಯಿಂದ ಕೈಬಿಡಲು ಡಾ. ಡಿ. ವೀರೇಂದ್ರ ಹೆಗ್ಗಡೆ ಮನವಿ

Upayuktha
0

ಹೊಸದಿಲ್ಲಿ : ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೇಂದ್ರದ  ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್‍ ರೆಡ್ಡಿಯವರನ್ನು ಗುರುವಾರ ಹೊಸದಿಲ್ಲಿಯಲ್ಲಿ ಭೇಟಿಯಾಗಿ ಜಾರ್ಖಂಡ್‍ ರಾಜ್ಯದ ಪ್ರಸಿದ್ಧ ಜೈನ ಕ್ಷೇತ್ರವಾದ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ಕೇಂದ್ರವೆಂದು ಅಲ್ಲಿನ ರಾಜ್ಯ ಸರ್ಕಾರವು ಪರಿಗಣಿಸಿರುವುದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.


ಇದಕ್ಕೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಸಚಿವರು, ನಾನು ಈಗಾಗಲೇ ಲೋಕಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವುದಾಗಿ ಮತ್ತು ತಮ್ಮ ಕೋರಿಕೆಯ ಮೇರೆಗೆ ತಕ್ಷಣ ಜಾರ್ಖಂಡ್‍ನ ಮಾನ್ಯ ಮುಖ್ಯಮಂತ್ರಿಯವರಿಗೆ ಮತ್ತೊಂದು ಪತ್ರವನ್ನು ಬರೆದು ಸಮ್ಮೇದ ಶಿಖರ್ಜಿಯ ಪಾವಿತ್ರ್ಯತೆಯನ್ನು ಉಳಿಸುವಂತೆ ಮತ್ತು ಪ್ರವಾಸಿ ತಾಣ ಎಂಬುದನ್ನು ಕೈ ಬಿಡಬೇಕೆಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top