ವಳಚ್ಚಿಲ್ ಎಕ್ಸ್‌ಪರ್ಟ್ ಕಾಲೇಜು: 37ನೇ ವಾರ್ಷಿಕ ದಿನಾಚರಣೆ ನಾಳೆ

Upayuktha
0

 


ಮಂಗಳೂರು: ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ 37ನೇ ವಾರ್ಷಿಕ ದಿನಾಚರಣೆ ಡಿ.29ರಂದು ಎಕ್ಸ್‌ಪರ್ಟ್‌ ಪದವಿಪೂರ್ವ ಕಾಲೇಜಿನ ವಳಚ್ಚಿಲ್ ಕ್ಯಾಂಪಸ್ಸಿನಲ್ಲಿ ನಡೆಯಲಿದೆ.

ಬೆಳಿಗ್ಗೆ 8.05ಕ್ಕೆ ಧ್ವಜಾರೋಹಣ ನಡೆಯಲಿದೆ. ಬಳಿಕ ಎಕ್ಸ್‍ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ಅವರು ವಾರ್ಷಿಕ ದಿನಾಚರಣೆಯ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಖ್ಯಾತ ವೈದ್ಯ ಡಾ.ಹೇಮಂತ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. 8.40ರಿಂದ ವಿವಿಧ ಸ್ಪರ್ಧೆಗಳು ನಡೆಯಲಿದೆ.

ಸಂಜೆ 5.25ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಕರ್ನಾಟಕ ಸ್ಟೇಟ್ ಕೌನ್ಸಿಲ್‍ನ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅ್ಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಕೆ.ಉಲ್ಲಾಸ್ ಕಾಮತ್ ಅವರು ಉದ್ಘಾಟಿಸುವರು. ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್ ಪ್ರಾಸ್ತಾವಿಕ ಭಾಷಣ ಮಾಡುವರು. ಸಮಾರಂಭದಲ್ಲಿ ರ್ಯಾಂಕ್ ವಿಜೇತರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಟ್ರಾಫಿಕ್ ಪೋಲಿಸ್ ಠಾಣೆಗೆ ಗಣಕಯಂತ್ರವನ್ನು ಸಂಸ್ಥೆಯ ವತಿಯಿಂದ ಉದಾರವಾಗಿ ನೀಡಲಾಗುವುದು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. 


ಕಥಕ್ ನೃತ್ಯ ಕಾರ್ಯಕ್ರಮ:

ಡಿ.30ರಂದು ಬೆಂಗಳೂರಿನ ಅಭಿನವ ಡ್ಯಾನ್ಸ್ ಕಂಪೆನಿಯ ನಿರುಪಮ ರಾಜೇಂದ್ರ ಅವರ ತಂಡದಿಂದ ಆಕರ್ಷಕ ಕಥಕ್ ನೃತ್ಯ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭವನ್ನು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರು ಉದ್ಘಾಟಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top