ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಬ್ರೈಲ್‌ ಕಿಟ್ ಸೌಲಭ್ಯ: ಅರ್ಜಿ ಆಹ್ವಾನ

Upayuktha
0

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಂದ ಉಚಿತ ಲ್ಯಾಪ್‌ಟಾಪ್ ಹಾಗೂ ಬ್ರೈಲ್‌ಕಿಟ್‌ಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top