ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ 2022-23ನೇ ಸಾಲಿನ ರಾಷ್ಟ್ರೀಯ ಯೋಜನೆ ಘಟಕ 1 ಮತ್ತು 2ರ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಜತ್ತೋಡಿ, ಬೆರ್ಕಳ ಇಲ್ಲಿ ಆಯೋಜಿಸಲಾಗಿದ್ದು, ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಮಂಗಳವಾರ (ಡಿ.21) ಶ್ರೀಮತಿ ಶಶಿಪ್ರಭ, ಅಧ್ಯಕ್ಷರು, ಗ್ರಾಮ ಪಂಚಾಯತ್ ಮಡಂತ್ಯಾರು ಇವರು ನೆರವೇರಿಸಿ ಕೊಟ್ಟರು.
ಶಿಬಿರದ ಯೋಜನಾಧಿಕಾರಿ ಪ್ರೊ. ಸಂತೋಷ್ ಪ್ರಭು ಇವರು ಶಿಬಿರದ ಮಹತ್ವದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಶ್ರೀಮತಿ ಶಶಿಪ್ರಭ ಇವರು ವಿದ್ಯಾರ್ಥಿ ದೆಸೆಯಲ್ಲಿ ಸೇವೆ ಮಾಡುವುದರಿಂದ ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳುತ್ತಾರೆ, ಇದು ವಿದ್ಯಾರ್ಥಿಗಳು ಹಾಗೂ ಸಮಾಜದ ಸರ್ವತೋಮುಖ ಬೆಳವಣಿಗೆಗೆ ಪೂರಕ ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಟಿ.ಕೆ ಶರತ್ ಕುಮಾರ್, ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಶುಭ ಹಾರೈಸಿದರು. ಈ ಕಾರ್ಯಕ್ರಮವನ್ನು ಲಕ್ಷ್ಮಿ ಜೆ ನಿರ್ವಹಿಸಿದರು, ಮನೋಜ್ ಅವರು ಧನ್ಯವಾದವಿತ್ತರು. ಕಾಲೇಜಿನ ಯೋಜನಾಧಿಕಾರಿ ಶ್ರೀಮತಿ ಚಿತ್ರಾ ಪಡಿಯಾರ್, ಎಸ್‌ಡಿಎಂಸಿ ಅಧ್ಯಕ್ಷ ಶಶಿಕಿರಣ್, ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಬೀನಾ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದದವರು ಹಾಗೂ ಶಾಲೆಯ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ