ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಸಂಘದ ವತಿಯಿಂದ ಗೀತಾ ಜಯಂತಿ ಕಾರ್ಯಕ್ರಮ ನಡೆಯಿತು.
ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ಅಧ್ಯಕ್ಷತೆ ವಹಿಸಿದ್ದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್ಇ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಭಾಷಾ ಶಿಕ್ಷಕಿ ಸುಜನಾ ಇವರು ಅಭ್ಯಾಗತರಾಗಿ ಆಗಮಿಸಿ ಭಗವದ್ಗೀತೆಯ ಮಹತ್ವದ ಬಗ್ಗೆ ಉಪನ್ಯಾಸ ಮಾಡಿದರು. ಹಿರಿಯ ವಿದ್ಯಾರ್ಥಿ ಹಾಗೆಯೇ ಸಂಸ್ಕೃತ ಸಂಘದ ಮಾಜಿ ಅಧ್ಯಕ್ಷ ಪ್ರಜ್ವಿತ್ ರೈ ಉಪಸ್ಥಿತರಿದ್ದರು.
ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಬಿಂದುಶ್ರೀ ಸ್ವಾಗತಿಸಿ, ಕಿಶೋರ್ ಪಾಟೀಲ್ ವಂದಿಸಿದರು. ಆದಿತ್ಯ ಹೆಗಡೆ ನಿರೂಪಿಸಿದರು. ಈ ಸಂದರ್ಭದಲ್ಲಿ ಗೀತಾ ಕಂಠಪಾಠ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ